ನವದೆಹಲಿ: ಕ್ರಿಕೆಟ್ ಮೈದಾನದಲ್ಲಿ ದಾಖಲೆ ಮೇಲೆ ದಾಖಲೆ ನಿರ್ಮಾಣ ಮಾಡಿರುವ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ, ಇದೀಗ ಮೈದಾನಕ್ಕಿಳಿಯದೇ ಹೊಸದೊಂದು ಸಾಧನೆ ಮಾಡಿದ್ದಾರೆ. ಇಂತಹ ರೆಕಾರ್ಡ್ ಬರೆದಿರುವ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.
ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ನಲ್ಲಿ ವಿರಾಟ್ ಕೊಹ್ಲಿ ಬರೋಬ್ಬರಿ 20 ಕೋಟಿ ಫಾಲೋವರ್ಸ್(200 ಮಿಲಿಯನ್) ಹೊಂದಿದ್ದಾರೆ. ಇಷ್ಟೊಂದು ಫಾಲೋವರ್ಸ್ ಹೊಂದಿರುವ ವಿಶ್ವದ ಏಕೈಕ ಕ್ರಿಕೆಟಿಗ ಹಾಗೂ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಇದರ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ವಿಶ್ವದ ಮೂರನೇ ಆಟಗಾರ ಎಂಬ ಸಾಧನೆ ಸಹ ನಿರ್ಮಿಸಿದ್ದಾರೆ. ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವರ ಪೈಕಿ ಫುಟ್ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ಅಗ್ರ ಸ್ಥಾನದಲ್ಲಿದ್ದು, ಇವರು 451 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ತದನಂತರ ಅರ್ಜೆಂಟೀನಾದ ಲಿಯೊನಲ್ ಮೆಸ್ಸಿ 334 ಫಾಲೋವರ್ಸ್ ಹೊಂದಿದ್ದಾರೆ. ನಂತರದ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದಾರೆ.