ಸೆಂಚುರಿಯನ್(ದಕ್ಷಿಣ ಆಫ್ರಿಕಾ): ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ನಾಳೆಯಿಂದ ಟೆಸ್ಟ್ ಸರಣಿಯಲ್ಲಿ ಭಾಗಿಯಾಗಲಿದ್ದು, ಅದಕ್ಕಾಗಿ ಎಲ್ಲ ರೀತಿಯಿಂದಲೂ ಸಜ್ಜಾಗಿದೆ. ಹರಿಣಗಳ ನಾಡಲ್ಲಿ ಹೊಸ ಇತಿಹಾಸ ರಚನೆ ಮಾಡಲು ಸಿದ್ಧಗೊಂಡಿರುವ ಭಾರತ ಕಳೆದ ಒಂದು ವಾರದಿಂದ ಕಠಿಣ ಅಭ್ಯಾಸ ನಡೆಸಿದ್ದು, ನಾಳೆಯಿಂದ ಮೈದಾನಕ್ಕಿಳಿಯಲಿದೆ.
ಏಕದಿನ ಹಾಗೂ ಟಿ-20 ಕ್ರಿಕೆಟ್ ನಾಯಕತ್ವ ತ್ಯಜಿಸಿರುವ ವಿರಾಟ್ ಕೊಹ್ಲಿಗೆ ಟೆಸ್ಟ್ ತಂಡದ ಮುಂದಾಳತ್ವ ಮಾತ್ರ ವಹಿಸಿಕೊಂಡಿದ್ದು, ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.
ವಿರಾಟ್ ಕೊಹ್ಲಿ ವಿಚಾರವಾಗಿ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಮಾತನಾಡಿದ್ದು, ಆತನೋರ್ವ ಅದ್ಭುತ ನಾಯಕ ಎಂದು ಗುಣಗಾನ ಮಾಡಿದ್ದಾರೆ. ವರ್ಚುಯಲ್ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿರುವ ಟೀಂ ಇಂಡಿಯಾ ಕೋಚ್, ಟೆಸ್ಟ್ ಕ್ರಿಕೆಟ್ ಹೆಚ್ಚಾಗಿ ಪ್ರೀತಿಸುವ ಪ್ಲೇಯರ್ಗಳಲ್ಲಿ ವಿರಾಟ್ ಕೂಡ ಒಬ್ಬರು. ದಕ್ಷಿಣ ಆಫ್ರಿಕಾದಲ್ಲಿ ನಾವು ಸುಧಾರಿಸಿಕೊಳ್ಳಬೇಕಾಗಿದ್ದು, ವಿರಾಟ್ ಅತಿದೊಡ್ಡ ಪಾತ್ರ ನಿರ್ವಹಿಸಲಿದ್ದಾರೆ ಎಂದರು.