ಮುಂಬೈ:ಕಳೆದ ಕೆಲ ವರ್ಷಗಳಿಂದ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿರುವ ಟೀಂ ಇಂಡಿಯಾದ ರನ್ ಮಷಿನ್ ಖ್ಯಾತಿಯ ವಿರಾಟ್ ಕೊಹ್ಲಿ ಮುಂಬರುವ ದಕ್ಷಿಣ ಆಫ್ರಿಕಾ ಸರಣಿಯಿಂದ ಹೊರಗುಳಿದು, ವಿಶ್ರಾಂತಿ ಪಡೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಬಿಸಿಸಿಐ ಕೂಡ ಅವರಿಗೆ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚನೆ ನೀಡುವ ಸಾಧ್ಯತೆ ಇದೆ ಎನ್ನಲಾಗ್ತಿದೆ.
ಕಳೆದ ಮೂರು ವರ್ಷಗಳಿಂದ ಶತಕ ವಂಚಿತರಾಗಿರುವ ವಿರಾಟ್ ಕೊಹ್ಲಿ ಪ್ರಸ್ತುತ ಐಪಿಎಲ್ನಲ್ಲೂ ಕಳಪೆ ಫಾರ್ಮ್ ಮುಂದುವರೆಸಿದ್ದು, ಮೂರು ಸಲ ಗೋಲ್ಡನ್ ಡಕೌಟ್ ಆಗಿದ್ದಾರೆ. ಹೀಗಾಗಿ, ಅವರಿಗೆ ವಿಶ್ರಾಂತಿ ನೀಡಬೇಕೆಂದು ಅನೇಕ ಕ್ರಿಕೆಟರ್ಸ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಬಿಸಿಸಿಐ ಕೂಡ ಇದನ್ನ ಪರಿಗಣನೆಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ಐಪಿಎಲ್ ಮುಕ್ತಾಯಗೊಳ್ಳುತ್ತಿದ್ದಂತೆ ಟೀಂ ಇಂಡಿಯಾ ಜೂನ್ 9ರಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾಗಿಯಾಗಲಿದ್ದು, ಇದರ ಬೆನ್ನಲ್ಲೇ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಹೀಗಾಗಿ, ಐದು ಟಿ-20 ಪಂದ್ಯಗಳಿಂದ ವಿರಾಟ್ಗೆ ವಿಶ್ರಾಂತಿ ನೀಡುವ ಸಾಧ್ಯತೆ ದಟ್ಟವಾಗಿದೆ ಎಂದು ಪಿಟಿಐ ವರದಿ ಮಾಡಿದೆ.