ಅಹಮದಾಬಾದ್ :ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ದ್ವಿತೀಯ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತವರಿನಲ್ಲಿ 100 ಏಕದಿನ ಪಂದ್ಯಗಳನ್ನಾಡಿ ಭಾರತದ ಐದನೇ ಕ್ರಿಕೆಟಿಗ ಎಂಬ ಶ್ರೇಯಕ್ಕೆ ಪಾತ್ರರಾದರು.
ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದ ಮಾಜಿ ನಾಯಕ ವಿರಾಟ್ ಕೊಹ್ಲಿ, ದಿಗ್ಗಜರಾದ ಸಚಿನ್ ತೆಂಡೂಲ್ಕರ್, ಮೊಹಮ್ಮದ್ ಅಜರುದ್ದೀನ್, ಎಂಎಸ್ ಧೋನಿ ಮತ್ತು ಯುವರಾಜ್ ಸಿಂಗ್ ಅವರ ಸಾಲಿಗೆ ಸೇರಿಕೊಂಡರು.
ವಿರಾಟ್ ಕೊಹ್ಲಿ ಒಟ್ಟು 259 ಏಕದಿನ ಪಂದ್ಯಗಳನ್ನು ಆಡಿದ್ದು, 12,311 ರನ್ ಹೆಚ್ಚು ರನ್ ಗಳಿಸಿದ್ದಾರೆ. ತವರಿನಲ್ಲಿ ಇಂದಿನ ಪಂದ್ಯ ಸೇರಿದಂತೆ 100 ಪಂದ್ಯಗಳನ್ನಾಡಿದ್ದು, 5020 ರನ್ಗಳಿಸಿದ್ದಾರೆ. 19 ಶತಕ ಮತ್ತು 25 ಶತಕ ಅವರ ಖಾತೆಯಲ್ಲಿವೆ.