ಟಿ20 ವಿಶ್ವಕಪ್‌ಗೆ ಪೂರ್ವ ತಯಾರಿಗಾಗಿ ಟೀಂ ಇಂಡಿಯಾ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿ ಆಡಲಿದೆ. ಆಸೀಸ್ ಮತ್ತು ಭಾರತ ಮೂರು ಟಿ20 ಸರಣಿ ಸೆಪ್ಟೆಂಬರ್ 20 ರಿಂದ ಆರಂಭವಾಗಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾದ ಬ್ಯಾಟಿಂಗ್ ಕಿಂಗ್ ವಿರಾಟ್ ಕೊಹ್ಲಿ ಅಪರೂಪದ ದಾಖಲೆಗಳನ್ನು ಬರೆಯುವ ಅವಕಾಶವಿದೆ.
ಏಷ್ಯಾಕಪ್ನಲ್ಲಿ ಅದ್ಭುತವಾಗಿ ಕಮ್ಬ್ಯಾಕ್ ಮಾಡಿ ತಮ್ಮ ಹಳೆಯ ಖದರ್ ತೋರಿಸಿದ್ದಾರೆ. ಹಾಗಾಗಿ ಈ ದಾಖಲೆಗಳನ್ನು ಕೊಹ್ಲಿ ಬರೆಯುವ ಸಾಧ್ಯತೆ ಇದೆ. ವಿರಾಟ್ ಕೊಹ್ಲಿ ಏಷ್ಯಾ ಕಪ್ನಲ್ಲಿ 122 ರನ್ ಬಾರಿಸುವ ಮೂಲಕ ಭಾರತದ ಪರವಾಗಿ ಅತ್ಯಧಿಕ ರನ್ ಬಾರಿಸಿದ ದಾಖಲೆ ಬರೆದುಕೊಂಡರು. 118 ರನ್ ಗಳಿಸಿದ್ದ ರೋಹಿತ್ ದಾಖಲೆ ಮುರಿದರು. ಚುಟುಕು ಕ್ರಿಕೆಟ್ನಲ್ಲಿ ವಿರಾಟ್ 3,584 ರನ್ ಬಾರಿಸಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (3,620) ಬಳಿಕ ಎರಡನೇ ಸ್ಥಾನದಲ್ಲಿದ್ದಾರೆ.