ನವದೆಹಲಿ: ಭಾರತ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಲೆಜೆಂಡರಿ ಬ್ಯಾಟರ್ ಸಚಿನ್ ತೆಂಡೂಲ್ಕರ್ ಸೇರಿದಂತೆ ಭಾರತದ ಹಲವಾರು ಹಾಲಿ ಮತ್ತು ಮಾಜಿ ಕ್ರಿಕೆಟಿಗರು ಬುಧವಾರ ಹೆಲಿಕಾಪ್ಟರ್ ಪತನದಲ್ಲಿ ಹುತಾತ್ಮರಾಗಿರುವ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರ 11 ಸೇನಾ ಅಧಿಕಾರಿಗಳಿಗೆ ಸಂತಾಪ ಸೂಚಿಸಿದ್ದಾರೆ.
ಬುಧವಾರ ಮಧ್ಯಾಹ್ನದ ಸಮಯದಲ್ಲಿ ಕೊಯಮತ್ತೂರಿನ ಬಳಿ ಹೆಲಿಕಾಪ್ಟರ್ ಸ್ಫೋಟಗೊಂಡು ಬಿಪಿನ್ ರಾವತ್ ಸೇರಿ 13 ಮಂದಿ ಹುತಾತ್ಮರಾಗಿದ್ದರು. ಇವರೆಲ್ಲರೂ ವೆಲ್ಲಿಂಗ್ಟನ್ನಲ್ಲಿ ಸೇನಾಕಾಲೇಜಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿತ್ತು.
ಹೆಲಿಕಾಪ್ಟರ್ ಅಪಘಾತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಜಿ ಮತ್ತು ಇತರ ಈ ದುಃಖದ ಸಂದರ್ಭದಲ್ಲಿ ಅವರ ಸ್ನೇಹಿತರು ಮತ್ತು ಕುಟುಂಬದ ಸದಸ್ಯರಿಗೆ ನನ್ನ ಸಂತಾಪ ತಿಳಿಸುತ್ತೇನೆ ಎಂದು ವಿರಾಟ್ ಕೊಹ್ಲಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.