ದಿ ಓವೆಲ್(ಇಂಗ್ಲೆಂಡ್):ಬ್ಯಾಟಿಂಗ್ನಲ್ಲಿ ಸತತ ವೈಫಲ್ಯ ಅನುಭವಿಸುತ್ತಿರುವ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಿಂದ ಹೊರಗುಳಿಯಲಿದ್ದಾರೆಂಬ ವರದಿ ಪ್ರಕಟಗೊಂಡಿದೆ. ಆಂಗ್ಲರ ವಿರುದ್ಧದ ಮೂರನೇ ಟಿ-20 ಪಂದ್ಯದ ವೇಳೆ ಗ್ರೋಯಿನ್ ಇಂಜುರಿಗೆ ತುತ್ತಾಗಿರುವ ಕಾರಣ ಅವರು ಅಲಭ್ಯರಾಗಲಿದ್ದಾರೆಂದು ಹೇಳಲಾಗುತ್ತಿದೆ.
ಭಾರತ-ಇಂಗ್ಲೆಂಡ್ ನಡುವೆ ಲಂಡನ್ನ ದಿ ಓವಲ್ ಮೈದಾನದಲ್ಲಿ ಮೊದಲ ಏಕದಿನ ಪಂದ್ಯ ನಾಳೆ ನಡೆಯಲಿದೆ. ಈ ಪಂದ್ಯಕ್ಕೆ ಅವರು ಅಲಭ್ಯರಾಗಲಿದ್ದು, ಮುಂದಿನ ಪಂದ್ಯಗಳಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ವಿರಾಟ್ ಕೊಹ್ಲಿ ಗಾಯದ ಸ್ವರೂಪದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೊದಲ ಏಕದಿನ ಪಂದ್ಯದಿಂದ ವಿರಾಟ್ ಕೊಹ್ಲಿ ಔಟ್? ನಾಟಿಂಗ್ಹ್ಯಾಮ್ನಲ್ಲಿ ನಡೆದ ಮೂರನೇ ಟಿ20 ಪಂದ್ಯದ ಬಳಿಕ ಟೀಂ ಇಂಡಿಯಾ ಬಸ್ನಲ್ಲಿ ದಿ ಓವಲ್ಗೆ ತೆರಳಿದ್ದು, ವಿರಾಟ್ ಅವರೊಂದಿಗೆ ಪ್ರಯಾಣ ಬೆಳೆಸಿಲ್ಲ ಎನ್ನಲಾಗಿದೆ. ವೈದ್ಯಕೀಯ ಚಿಕಿತ್ಸೆಗೋಸ್ಕರ ವಿರಾಟ್ ನ್ಯಾಟಿಂಗ್ಹ್ಯಾಮ್ನಲ್ಲಿ ಉಳಿದುಕೊಂಡಿದ್ದಾರಂತೆ. ಏಕದಿನ ಪಂದ್ಯದಲ್ಲಿ ಶಿಖರ್ ಧವನ್, ಶಾರ್ದೂಲ್ ಠಾಕೂರ್, ಪ್ರಸಿದ್ಧ್ ಕೃಷ್ಣ ಕಣಕ್ಕಿಳಿಯವ ಸಾಧ್ಯತೆ ಇದೆ.
ಇದನ್ನೂ ಓದಿರಿ:ಟಿ - 20 ಗೆದ್ದಾಯ್ತು: ನಾಳೆಯಿಂದ ಇಂಡೋ - ಆಂಗ್ಲರ ಏಕದಿನ ಕದನ; ಆತ್ಮವಿಶ್ವಾಸದಲ್ಲಿ ರೋಹಿತ್ ಪಡೆ
ನಾಳೆಯ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವಕಾಶ ತಪ್ಪಿಸಿಕೊಂಡರೆ ಅವರ ಸ್ಥಾನಕ್ಕೆ ಸೂರ್ಯಕುಮಾರ್ ಯಾದವ್ ಆಯ್ಕೆಯಾಗಿ ಬ್ಯಾಟ್ ಬೀಸುವ ಸಾಧ್ಯತೆ ದಟ್ಟವಾಗಿದೆ. ಉಳಿದಂತೆ ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್, ರಿಷಭ್ ಪಂತ್, ರವೀಂದ್ರ ಜಡೇಜಾ ಇರಲಿದ್ದಾರೆ.ಕಳೆದ ಎರಡೂವರೆ ವರ್ಷಗಳಿಂದ ವಿರಾಟ್ ಕೊಹ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿದ್ದಾರೆ. ಅವರ ಬ್ಯಾಟ್ನಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಏನು ಮೂಡಿ ಬಂದಿಲ್ಲ. ಹೀಗಾಗಿ, ಅವರ ವಿರುದ್ಧ ಅನೇಕರು ಟೀಕೆ ಮಾಡಿದ್ದಾರೆ. ಆದರೆ, ಕ್ಯಾಪ್ಟನ್ ರೋಹಿತ್ ಮಾತ್ರ ಮಾಜಿ ನಾಯಕನ ಪರ ಬ್ಯಾಟ್ ಬೀಸಿದ್ದಾರೆ.