ಕೇಪ್ಟೌನ್(ದಕ್ಷಿಣ ಆಫ್ರಿಕಾ): ದಕ್ಷಿಣ ಆಫ್ರಿಕಾ ವಿರುದ್ಧ ನಾಳೆಯಿಂದ ಮೊದಲ ಏಕದಿನ ಪಂದ್ಯ ಆರಂಭಗೊಳ್ಳಲಿದೆ. ಕೆ.ಎಲ್.ರಾಹುಲ್ ನೇತೃತ್ವದಲ್ಲಿ ಟೀಂ ಇಂಡಿಯಾ ಸಂಪೂರ್ಣವಾಗಿ ಸನ್ನದ್ಧವಾಗಿದೆ.
ಈ ಬಳಗದಲ್ಲಿ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಕೂಡ ಕಣಕ್ಕಿಳಿಯಲಿದ್ದಾರೆ. ವಿಶೇಷವೆಂದರೆ, ಡೆಲ್ಲಿ ಡ್ಯಾಶರ್ ಏಕದಿನ ನಾಯಕತ್ವದಿಂದ ಕೆಳಗಿಳಿದ ಬಳಿಕ ನಡೆಯುತ್ತಿರುವ ಮೊದಲ ಏಕದಿನ ಸರಣಿ ಇದಾಗಿದೆ.
ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡವನ್ನು ಕನ್ನಡಿಗ ರಾಹುಲ್ ಮುನ್ನಡೆಸುತ್ತಿದ್ದು, ಅಭ್ಯಾಸದ ವೇಳೆ ಕೆ.ಎಲ್ ಮಾತನಾಡ್ತಿದ್ದಾಗ ವಿರಾಟ್ ಕೇಳುಗನಾಗಿ ನಿಂತಿರುವುದು ಕಂಡುಬಂತು. ಇಷ್ಟುದಿನ ತಂಡವನ್ನು ಮುನ್ನಡೆಸುತ್ತಿದ್ದ ವಿರಾಟ್ ಕೊಹ್ಲಿ ಕಳೆದ ವರ್ಷ ಐಸಿಸಿ ಟಿ-20 ವಿಶ್ವಕಪ್ ಮುಗಿಯುತ್ತಿದ್ದಂತೆ ನಾಯಕತ್ವ ತ್ಯಜಿಸಿದ್ದರು. ಇದರ ನಂತರ ಅವರನ್ನು ಏಕದಿನ ನಾಯಕತ್ವದಿಂದಲೂ ಕೆಳಗಿಳಿಸಲಾಗಿತ್ತು. ಇದೀಗ ಸಾಮಾನ್ಯ ಆಟಗಾರನಾಗಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.