ಬೆಂಗಳೂರು: ಭಾರತ ತಂಡದ ಮಾಜಿ ನಾಯಕ ಹಾಗೂ ಕನ್ನಡಿಗ ರಾಹುಲ್ ದ್ರಾವಿಡ್ ಅವರು ಟೀಂ ಇಂಡಿಯಾ ಮುಖ್ಯ ಕೋಚ್ ಆಗುತ್ತಿದ್ದಂತೆ, ಖಾಲಿಯಾಗಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥ ಹುದ್ದೆಗೇರುವುದಕ್ಕೆ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ತಿರಸ್ಕರಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಿಸಿಸಿಐ ಸಂವಿಧಾನದ ಪ್ರಕಾರ ಬೋರ್ಡ್ ವ್ಯಾಪ್ತಿಯಲ್ಲಿ ಒಮ್ಮೆಲೆ ಎರಡು ಅಧಿಕಾರ ಪಡೆಯಲು ಅವಕಾಶವಿಲ್ಲ. ಟಿ20 ವಿಶ್ವಕಪ್ ನಂತರ ಎನ್ಸಿಎ ಅಧ್ಯಕ್ಷ ಸ್ಥಾನದಲ್ಲಿರುವ ದ್ರಾವಿಡ್, ಭಾರತ ತಂಡದ ಮುಖ್ಯ ಕೋಚ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಹಾಗಾಗಿ, ಖಾಲಿಯಾಗುವ ಎನ್ಸಿಎ ಮುಖ್ಯಸ್ಥ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿಯನ್ನು ಹುಡುಕಾಟ ನಡೆಸಿತ್ತು.