ಮೆಲ್ಬೋರ್ನ್: ಐಪಿಎಲ್ನಲ್ಲಿ ಪಾಲ್ಗೊಂಡಿದ್ದ ಅಗ್ರ 7 ಆಸ್ಟ್ರೇಲಿಯಾ ಕ್ರಿಕೆಟಿಗರು ಮುಂಬರುವ ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ವಿರುದ್ಧದ ಸೀಮಿತ ಓವರ್ಗಳ ಸರಣಿಯಿಂದ ಹೊರಬಿದ್ದಿದ್ದಾರೆ.
ಈವರ್ಷ ನಡೆಯಲಿರುವ ಟಿ20 ವಿಶ್ವಕಪ್ಗೆ ಪೂರ್ವಭಾವಿಯಾಗಿ ಈ ಸರಣಿಗಳನ್ನು ಆಯ್ಕೆ ಮಾಡಲಾಗಿತ್ತು. ಆದರೆ ಬಯೋಬಲ್ನಿಂದ ವಿಶ್ರಾಂತಿ ಬಯಸಿರುವ ಡೇವಿಡ್ ವಾರ್ನರ್, ಪ್ಯಾಟ್ ಕಮಿನ್ಸ್, ಗ್ಲೇನ್ ಮ್ಯಾಕ್ಸ್ವೆಲ್, ಜೇ ರಿಚರ್ಡ್ಸನ್, ಕೇನ್ ರಿಚರ್ಡ್ಸನ್, ಮಾರ್ಕಸ್ ಸ್ಟೋಯ್ನಿಸ್ ಮತ್ತು ಡೇನಿಯಲ್ ಸ್ಯಾಮ್ಸ್ ಈ ಸರಣಿಗೆ ತಮ್ಮನ್ನು ಪರಿಗಣಿಸದಿರುವಂತೆ ಕ್ರಿಕೆಟ್ ಆಸ್ಟ್ರೇಲಿಯಾಗೆ ಮನವಿ ಮಾಡಿದ್ದಾರೆ.
ಇನ್ನು ಸ್ಟೀವನ್ ಸ್ಮಿತ್ ಐಪಿಎಲ್ ವೇಳೆ ಸಂಭವಿಸಿದ್ದ ಮೊಣಕೈ ಗಾಯದಿಂದ ಈಗಷ್ಟೇ ಚೇತರಿಸಿಕೊಂಡಿದ್ದು, ವಿಶ್ರಾಂತಿ ಬಯಸಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ. ಇದರಿಂದ ಅಕ್ಟೋಬರ್ ಮತ್ತು ನವೆಂಬರ್ ನಡುವೆ ನಡೆಯಲಿರುವ ಟಿ20 ವಿಶ್ವಕಪ್ಗೆ ಜಸ್ಟಿನ್ ಲ್ಯಾಂಡ್ ತಮ್ಮ 7 ಸ್ಟಾರ್ ಆಟಗಾರರಿಲ್ಲದೆ ಪ್ರವಾಸ ಕೈಗೊಳ್ಳಬೇಕಿದೆ.