ದುಬೈ: ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟರ್ ಡೇವಿಡ್ ವಾರ್ನರ್ ಮತ್ತು ವೆಸ್ಟ್ ಇಂಡೀಸ್ ಮಹಿಳಾ ತಂಡದ ಆಲ್ರೌಂಡರ್ ಹೇಲಿ ಮ್ಯಾಥ್ಯೂಸ್ ಕ್ರಮವಾಗಿ ಪುರುಷ ಮತ್ತು ಮಹಿಳಾ ವಿಭಾಗದ ನವೆಂಬರ್ ತಿಂಗಳ ಐಸಿಸಿ ಆಟಗಾರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಡೇವಿಡ್ ವಾರ್ನರ್ ಚೊಚ್ಚಲ ಬಾರಿಗೆ ಆಸ್ಟ್ರೇಲಿಯಾದ ಗೆದ್ದ ಟಿ - 20 ವಿಶ್ವಕಪ್ನಲ್ಲಿ ಟೂರ್ನಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಅವರು ಸೆಮಿಫೈನಲ್ನಲ್ಲಿ ಪಾಕಿಸ್ತಾನದ ವಿರುದ್ಧ 49 ಮತ್ತು ನ್ಯೂಜಿಲ್ಯಾಂಡ್ ವಿರುದ್ಧ ಫೈನಲ್ನಲ್ಲಿ 53 ರನ್ಗಳಿಸಿದ್ದರು. ನವೆಂಬರ್ನ ತಿಂಗಳಲ್ಲಿ ಆಡಿದ 4 ಟಿ -20 ಪಂದ್ಯಗಳಿಂದ 209 ರನ್ಗಳಿಸಿದ್ದರು. ಅವರು ಸೂಪರ್ 12ನಲ್ಲೂ ವೆಸ್ಟ್ ಇಂಡೀಸ್ ವಿರುದ್ಧ ಅಜೇಯ 89 ರನ್ಗಳಿಸಿದ್ದರು.