ನವದೆಹಲಿ :ಪಾಕಿಸ್ತಾನ ವಿರುದ್ಧದ ಸೀಮಿತ ಓವರ್ಗಳ ಸರಣಿಗೆ ಕ್ರಿಕೆಟ್ ಆಸ್ಟ್ರೇಲಿಯಾ ತಂಡ ಪ್ರಕಟಿಸಿದೆ. ಡೇವಿಡ್ ವಾರ್ನರ್, ಪ್ಯಾಟ್ ಕಮಿನ್ಸ್ ಸೇರಿದಂತೆ ಕೆಲವು ಸ್ಟಾರ್ ಆಟಗಾರರು ಈ ಸರಣಿಗೆ ಅಲಭ್ಯರಾಗಲಿದ್ದಾರೆ.
ಬರೋಬ್ಬರಿ 24 ವರ್ಷಗಳ ನಂತರ ಆಸ್ಟ್ರೇಲಿಯಾ ತಂಡ ಪಾಕ್ ಪ್ರವಾಸ ಕೈಗೊಳ್ಳುತ್ತಿದೆ. ಸ್ಟಾರ್ ಆಟಗಾರರಾದ ಡೇವಿಡ್ ವಾರ್ನರ್ ಮಿಚೆಲ್ ಸ್ಟಾರ್ಕ್,ಪ್ಯಾಟ್ ಕಮಿನ್ಸ್ ಹಾಗೂ ಹೇಜಲ್ವುಡ್ ಟೆಸ್ಟ್ ಸರಣಿಗೆ ಮಾತ್ರ ಲಭ್ಯರಾಗಲಿದ್ದಾರೆ.
ಮಾರ್ಚ್ 29ರಿಂದ ಆರಂಭವಾಗಲಿರುವ ಸೀಮಿತ ಓವರ್ಗಳ ಸರಣಿಯಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿದ್ದಾರೆ. ಸ್ಫೋಟಕ ಆಲ್ರೌಂಡರ್ ಗ್ಲೇನ್ ಮ್ಯಾಕ್ಸ್ವೆಲ್ ವಿವಾಹದ ಕಾರಣ ಪಾಕಿಸ್ತಾನ ಪ್ರವಾಸದಿಂದ ಹಿಂದೆ ಸರಿದಿದ್ದಾರೆ.
ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಶೇನ್ ಮತ್ತು ಟ್ರಾವಿಸ್ ಹೆಡ್ ತಂಡದಲ್ಲಿರುವ ಸ್ಟಾರ್ ಆಟಗಾರರಾಗಿದ್ದಾರೆ. ಇನ್ನು ವಾರ್ನರ್ ಅನುಪಸ್ಥಿತಿಯಲ್ಲಿ ಬಿಬಿಎಲ್ ಸ್ಟಾರ್ ಮೆಕ್ಡರ್ಮಾಟ್ ಮತ್ತೊಂದು ಅವಕಾಶ ಪಡೆದಿದ್ದಾರೆ.