ನವದೆಹಲಿ:2023ರ ವಿಶ್ವಕಪ್ ಸೋಲಿನ ಬಳಿಕ ಭಾರತ ತಂಡ ಈಗ ತನ್ನ ಮುಂದಿನ ಪಂದ್ಯಕ್ಕೆ ಸಿದ್ಧವಾಗಿದೆ. ಗುರುವಾರದಿಂದ ಆಸ್ಟ್ರೇಲಿಯಾ ವಿರುದ್ಧ ಬ್ಲೂ ಬಾಯ್ಸ್ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಬೇಕಿದೆ. ಪ್ರತಿಷ್ಠಿತ ಸರಣಿ ಆರಂಭವಾಗುವ ಮುನ್ನವೇ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ಆಸ್ಟ್ರೇಲಿಯಾದ ಅನುಭವಿ ಓಪನರ್ ಡೇವಿಡ್ ವಾರ್ನರ್ ಭಾರತ ವಿರುದ್ಧದ ಟಿ20 ಸರಣಿಯಲ್ಲಿ ಭಾಗವಹಿಸುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಇಂದು ಕ್ರಿಕೆಟ್ ಆಸ್ಟ್ರೇಲಿಯಾ ನೀಡಿರುವ ಹೇಳಿಕೆಯಲ್ಲಿ, 'ವಿಶ್ವಕಪ್ ಗೆಲುವಿನ ನಂತರ ಅವರಿಗೆ ವಿಶ್ರಾಂತಿ ನೀಡಲು ನಿರ್ಧರಿಸಲಾಗಿದೆ. ಇದೀಗ ಅವರು ಶೀಘ್ರದಲ್ಲೇ ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ' ಎಂದು ಉಲ್ಲೇಖಿಸಿದೆ. ಮುಂದಿನ ತಿಂಗಳು ಪಾಕಿಸ್ತಾನ ವಿರುದ್ಧ ಆರಂಭವಾಗಲಿರುವ ಟೆಸ್ಟ್ ಸರಣಿಯಲ್ಲಿ ಡೇವಿಡ್ ವಾರ್ನರ್ ಪಾಲ್ಗೊಳ್ಳಲಿದ್ದಾರೆ. ಈ ಸರಣಿಯು ಅವರ ವೃತ್ತಿಜೀವನದ ಕೊನೆಯ ಟೆಸ್ಟ್ ಸರಣಿಯಾಗಿದೆ. ಇದಾದ ಬಳಿಕ ಅವರು ಈ ಸುದೀರ್ಘ ಸ್ವರೂಪದ ಕ್ರಿಕೆಟ್‌ಗೆ ವಿದಾಯ ಹೇಳಲಿದ್ದಾರೆ.
ಪಾಕ್ ವಿರುದ್ಧದ ಟೆಸ್ಟ್ ಸರಣಿಗೆ ಉತ್ತಮ ತಯಾರಿ ನಡೆಸಲು ಭಾರತದಲ್ಲಿ ನಡೆಯುತ್ತಿರುವ ಟಿ20 ಸರಣಿಯಿಂದ ವಾರ್ನರ್ಗೆ ವಿಶ್ರಾಂತಿ ನೀಡಲಾಗಿದೆ. ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯ ನಂತರ ವಾರ್ನರ್ ಏಕದಿನ ಮತ್ತು ಟಿ20 ಕ್ರಿಕೆಟ್‌ನಲ್ಲಿ ಆಡುವುದನ್ನು ಮುಂದುವರಿಸುತ್ತಾರೆ.