ಹೈದರಾಬಾದ್:ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ಕ್ಯಾಪ್ಟನ್ ಆಗಿದ್ದ ಡೇವಿಡ್ ವಾರ್ನರ್ ಸತತ ಸೋಲಿನಿಂದ ನಿರಾಸೆಗೊಳಗಾಗಿದ್ದು, ಇದೀಗ ನಾಯಕತ್ವ ಬಿಟ್ಟುಕೊಟ್ಟಿದ್ದಾರೆ.
ಇಲ್ಲಿಯವರೆಗೆ ಸನ್ರೈಸರ್ಸ್ ಹೈದರಾಬಾದ್ ತಂಡ ಆಡಿರುವ ಆರು ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಮಾತ್ರ ಗೆಲುವು ದಾಖಲು ಮಾಡಿದ್ದು, ಉಳಿದ ಐದು ಪಂದ್ಯಗಳಲ್ಲಿ ಸೋಲು ಕಂಡು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇದರ ಮಧ್ಯೆ ವಾರ್ನರ್ ಈ ನಿರ್ಧಾರ ಕೈಗೊಂಡಿದ್ದಾರೆ.
ಪ್ರಸಕ್ತ ಸಾಲಿನ ಐಪಿಎಲ್ನಲ್ಲಿ ಉಳಿದ ಪಂದ್ಯಗಳಲ್ಲಿ ಕೇನ್ ವಿಲಿಯಮ್ಸನ್ ನಾಯಕತ್ವನಾಗಿ ಮುಂದುವರೆಯಲಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪ್ರಾಂಚೈಸಿ ಕೂಡ ಪ್ರಕಟಣೆ ಹೊರಡಿಸಿದೆ.