ಕಟಕ್:ಭಾರತ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಆಟಗಾರ ಹಾಗೂ ದೇಶೀಯ ಕ್ರಿಕೆಟ್ನ ದೈತ್ಯ ವಾಸೀಂ ಜಾಫರ್ಗೆ ಇದೀಗ ಒಡಿಶಾ ಕ್ರಿಕೆಟ್ ಮಂಡಳಿ ಮಣೆ ಹಾಕಿದ್ದು, ಮುಂದಿನ ಎರಡು ವರ್ಷಗಳ ಅವಧಿಗೆ ತಂಡದ ಮುಖ್ಯ ಕೋಚ್ ಹುದ್ದೆಗೆ ನೇಮಕ ಮಾಡಿಕೊಂಡಿದೆ.
ಈ ಹಿಂದೆ ಉತ್ತರಾಖಂಡ ತಂಡದ ಕೋಚ್ ಆಗಿ ಕಾರ್ಯನಿರ್ವಹಿಸಿರುವ ಜಾಫರ್, ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕಿಂಗ್ಸ್ XI ಪಂಜಾಬ್ ತಂಡದ ಬ್ಯಾಟಿಂಗ್ ಕೋಚ್ ಆಗಿ ಸಹ ಸೇವೆ ಸಲ್ಲಿಸಿದ್ದಾರೆ. ಇದೀಗ ಅವರನ್ನ ಒಡಿಶಾ ಕ್ರಿಕೆಟ್ ತಂಡದ ಕೋಚ್ ಆಗಿ ನೇಮಕ ಮಾಡಿಕೊಳ್ಳಲಾಗಿದೆ ಎಂದು ಒಡಿಶಾ ಕ್ರಿಕೆಟ್ ಅಸೋಷಿಯೇಷನ್ ಕಾರ್ಯದರ್ಶಿ ಸಂಜಯ್ ಬೆಹ್ರಾ ತಿಳಿಸಿದ್ದಾರೆ. ತಂಡದ ಆಯ್ಕೆಯಲ್ಲಿ ಹಸ್ತಕ್ಷೇಪ ಮಾಡಿದ್ದಕ್ಕಾಗಿ ಉತ್ತರಾಖಂಡ ಕೋಚ್ ಸ್ಥಾನಕ್ಕೆ ತಾವು ರಾಜೀನಾಮೆ ನೀಡಿದ್ದಾಗಿ ಜಾಫರ್ ಹೇಳಿಕೊಂಡಿದ್ದರು.