ಬರ್ಮಿಂಗ್ಹ್ಯಾಮ್(ಎಡ್ಜಬಾಸ್ಟನ್): ಇಂಗ್ಲೆಂಡ್ ವಿರುದ್ಧ ನಡೆದ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ಗಳ ಸೋಲು ಕಂಡಿದೆ. ಈ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2 - 2 ಅಂತರದ ಸಮಬಲ ಸಾಧಿಸಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡ ಮುನ್ನಡೆಸಿರುವ ಯಾರ್ಕರ್ ಕಿಂಗ್ ಬುಮ್ರಾ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಫೈನಲ್ ಟೆಸ್ಟ್ ಪಂದ್ಯದಲ್ಲಿ ತಂಡದ ಸೋಲಿಗೆ ಬ್ಯಾಟರ್ಗಳ ಮೇಲೆ ಹಂಗಾಮಿ ನಾಯಕ ಬುಮ್ರಾ ಹರಿಹಾಯ್ದಿದ್ದಾರೆ. ಎರಡನೇ ಇನ್ನಿಂಗ್ಸ್ನಲ್ಲಿ ನಮ್ಮ ಬ್ಯಾಟರ್ಗಳು ಹೇಳಿಕೊಳ್ಳುವಂತಹ ಪ್ರದರ್ಶನ ನೀಡದ ಕಾರಣ ಸೋಲು ಕಾಣುವಂತಾಯಿತು ಎಂದಿದ್ದಾರೆ. ಕೊನೆಯ ಎರಡು ದಿನಗಳಲ್ಲಿ ಟೆಸ್ಟ್ ಪಂದ್ಯ ನಮ್ಮಿಂದ ಸಂಪೂರ್ಣವಾಗಿ ಕೈತಪ್ಪಿ ಹೋಯಿತು. ಜೊತೆಗೆ ಮಳೆ ಕೂಡ ನಮ್ಮ ಗೆಲುವಿಗೆ ಅಡ್ಡಿಯಾಯಿತು ಎಂದು ಹೇಳಿದ್ದಾರೆ.