ಹೈದರಾಬಾದ್(ತೆಲಂಗಾಣ): ಖ್ಯಾತ ಕ್ರಿಕೆಟ್ ತಾರೆ ಕೆ.ಎಲ್ ರಾಹುಲ್ ಮತ್ತು ಬಾಲಿವುಡ್ ನಟಿ ಆಥಿಯಾ ಶೆಟ್ಟಿ ಸಂಬಂಧ ಇದೀಗ ಗುಟ್ಟಾಗಿ ಉಳಿದಿಲ್ಲ. ಕಳೆದ ಕೆಲ ದಿನಗಳ ಹಿಂದೆ ಸುನೀಲ್ ಶೆಟ್ಟಿ ಕುಟುಂಬದೊಂದಿಗೆ ರಾಹುಲ್ ಕಾಣಿಸಿದ್ದರು. ಈ ಮೂಲಕ ಇಬ್ಬರ ನಡುವಿನ ಲವ್ವಿ-ಡವ್ವಿ ವಿಚಾರಕ್ಕೆ ಮತ್ತಷ್ಟು ಪುಷ್ಠಿ ಸಿಕ್ಕಿತ್ತು. ಇದೀಗ ಲಭ್ಯವಾಗಿರುವ ಮಾಹಿತಿ ಪ್ರಕಾರ ಈ ಜೋಡಿ 2022ರಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗಿದೆ.
ಬಾಲಿವುಡ್ ನಟ ಸುನೀಲ್ ಶೆಟ್ಟಿ ಮಕ್ಕಳಾಗಿರುವ ಆಥಿಯಾ ಮತ್ತು ಆಹಾನ್ ಶೆಟ್ಟಿ ವಿವಾಹ ಮಾಡಲು ಕುಟುಂಬ ನಿರ್ಧರಿಸಿದ್ದು, ಒಟ್ಟಿಗೆ ಮದುವೆ ಸಮಾರಂಭ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ವರದಿಗಳ ಪ್ರಕಾರ ಆಥಿಯಾ-ರಾಹುಲ್ ಸಂಬಂಧಕ್ಕೆ ಈಗಾಗಲೇ ಎರಡು ಕುಟುಂಬಗಳಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಮತ್ತೊಂದು ಕಡೆ ಆಹಾನ್ ಕೂಡ ತಮ್ಮ ಬಹುಕಾಲದ ಗೆಳತಿ ತಾನಿಯಾ ಶ್ರಾಫ್ ಜೊತೆ ಸಪ್ತಪದಿ ತುಳಿಯಲಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿರಿ:ಮೊದಲ ಸಲ ಸಾರ್ವಜನಿಕವಾಗಿ ಕಾಣಿಸಿಕೊಂಡ ಆಥಿಯಾ - ರಾಹುಲ್!