ಕರ್ನಾಟಕ

karnataka

ETV Bharat / sports

IND vs WI 2nd ODI: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ವಿಂಡೀಸ್; ಭಾರತಕ್ಕೆ ಸರಣಿ ಗೆಲುವಿನ ತವಕ

ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ನಿರೀಕ್ಷೆಯಂತೆಯೇ ಭಾರತ ತಂಡದಲ್ಲಿ ಕೆಲವು ಬದಲಾವಣೆಯಾಗಿದೆ.

By

Published : Feb 9, 2022, 2:00 PM IST

West Indies win toss, opt to field against India
West Indies win toss, opt to field against India

ಅಹಮದಾಬಾದ್‌: ಭಾರತ ಹಾಗೂ ವೆಸ್ಟ್ ಇಂಡೀಸ್‌ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಈಗಾಗಲೇ ಮೊದಲ ಪಂದ್ಯವನ್ನು ಗೆಲ್ಲುವುದರ ಮೂಲಕ ಭಾರತ ಶುಭಾರಂಭ ಮಾಡಿದೆ. ಇದೀಗ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಎರಡನೇ ಪಂದ್ಯ ನಡೆಯುತ್ತಿದ್ದು ಟೀಂ ಇಂಡಿಯಾ ಈ ಪಂದ್ಯವನ್ನೂ ಕೂಡಾ ಜಯಿಸುವ ಉತ್ಸಾಹದಲ್ಲಿದೆ.

ಮೊದಲ ಏಕದಿನ ಪಂದ್ಯದಲ್ಲಿ ಸೋಲುಂಡ ಎದುರಾಳಿ ತಂಡ ವಿಂಡೀಸ್‌, ಈ ಪಂದ್ಯ ಗೆದ್ದು ಸೇಡು ತೀರಿಸಿಕೊಳ್ಳುವ ಮೂಲಕ ಒತ್ತಡದಿಂದ ಪಾರಾಗಲಿದೆಯೇ? ಅನ್ನೋದನ್ನು ಕಾದು ನೋಡಬೇಕು. ಇನ್ನು, ನಿರೀಕ್ಷೆಯಂತೆಯೇ ಭಾರತ ತಂಡದಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಲಾಗಿದೆ.

ಉಪನಾಯಕ ಕೆ.ಎಲ್‌.ರಾಹುಲ್ ತಂಡ ಸೇರಿಕೊಂಡಿದ್ದಾರೆ. ಇಶಾನ್‌ ಕಿಶನ್ ಬದಲಿಗೆ ಕೆ.ಎಲ್. ಸ್ಥಾನ ಪಡೆದಿದ್ದಾರೆ. ವೆಸ್ಟ್ ಇಂಡೀಸ್ ತಂಡದ ನಿಯಮಿತ ನಾಯಕ ಕೀರನ್ ಪೊಲಾರ್ಡ್ ಗಾಯದ ಸಮಸ್ಯೆಯಿಂದಾಗಿ ಪಂದ್ಯದಿಂದ ಹೊರಗುಳಿದಿದ್ದಾರೆ.

ತಂಡಗಳು ಹೀಗಿವೆ:

ವೆಸ್ಟ್ ಇಂಡೀಸ್ (ಪ್ಲೇಯಿಂಗ್ XI): ಶಾಯ್ ಹೋಪ್(ವಿಕೆಟ್​ ಕೀಪರ್), ಬ್ರ್ಯಾಂಡನ್ ಕಿಂಗ್, ಡ್ಯಾರೆನ್ ಬ್ರಾವೋ, ಶಮರ್ ಬ್ರೂಕ್ಸ್, ನಿಕೋಲಸ್ ಪೂರನ್ (ನಾಯಕ), ಜೇಸನ್ ಹೋಲ್ಡರ್, ಅಕೇಲ್ ಹೊಸೈನ್, ಫ್ಯಾಬಿಯನ್ ಅಲೆನ್, ಓಡಿಯನ್ ಸ್ಮಿತ್, ಅಲ್ಜಾರಿ ಜೋಸೆಫ್, ಕೆಮರ್ ರೋಚ್

ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಕೆ.ಎಲ್.ರಾಹುಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್​ ಕೀಪರ್​) ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಾಲ್, ಪ್ರಸಿದ್ಧ್ ಕೃಷ್ಣ

ABOUT THE AUTHOR

...view details