ಹೈದರಾಬಾದ್: ಟಿ-20 ವಿಶ್ವಕಪ್ ಬಳಿಕ ಟಿ20ಯಿಂದ ದೂರ ಉಳಿದಿರುವ ರೋಹಿತ್ ಶರ್ಮಾ, ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆಯೂ ಸೀಮಿತ ಓವರ್‌ಗಳ ಕ್ರಿಕೆಟ್‌ನಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ಆದರೆ, ಬಿಸಿಸಿಐ ಮೂಲಗಳ ಪ್ರಕಾರ ಮುಂದಿನ ವರ್ಷ ನಡೆಯಲಿರುವ ಟಿ-20 ವಿಶ್ವಕಪ್‌ನಲ್ಲಿ ತಂಡವನ್ನು ಮುನ್ನಡೆಸಲು ಒಪ್ಪಿಗೆ ಸೂಚಿಸಿದ್ದಾರೆ. ರೋಹಿತ್‌ಗೆ ಬಿಸಿಸಿಐ ಟಿ20 ನಾಯಕತ್ವ ನೀಡಿದೆ. ಆದರೆ, ಅವರು ಪ್ರಸ್ತುತ ಬ್ರಿಟನ್‌ನಲ್ಲಿ ರಜೆ ದಿನಗಳನ್ನು ಕಳೆಯುತ್ತಿದ್ದಾರೆ ಮತ್ತು ವಿಶ್ರಾಂತಿ ಪಡೆಯಲು ಬಯಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ-20 ಸರಣಿಯ ನಂತರ ಭಾರತ ಕ್ರಿಕೆಟ್ ತಂಡ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳಬೇಕಿದೆ. ಟೀಂ ಇಂಡಿಯಾ ದಕ್ಷಿಣ ಆಫ್ರಿಕಾದಲ್ಲಿ ಮೂರು ಪಂದ್ಯಗಳ ಟಿ-20 ಸರಣಿ, ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿರುವುದು ಗೊತ್ತಿರುವ ಸಂಗತಿ. ಈ ಟಿ - 20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಟೀಂ ಇಂಡಿಯಾ ನಾಯಕರಾಗಲಿದ್ದಾರೆ.
ವಿಶೇಷ ಎಂದರೆ ರೋಹಿತ್ ಶರ್ಮಾ ಟಿ20 ತಂಡಕ್ಕೆ ಮರಳಿಲ್ಲ. ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ-20 ಸರಣಿಯಲ್ಲಿ ರೋಹಿತ್ ಶರ್ಮಾಗೆ ನಾಯಕತ್ವ ನೀಡಲಾಗುವುದು ಎಂದು ನಂಬಲಾಗಿತ್ತು. ಆದರೆ, ಅದು ಆಗಲಿಲ್ಲ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಹಿರಿಯ ಆಲ್‌ರೌಂಡರ್ ರವೀಂದ್ರ ಜಡೇಜಾ ಉಪನಾಯಕರಾಗಲಿದ್ದಾರೆ. ಆದರೆ, ಹಾರ್ದಿಕ್ ಪಾಂಡ್ಯ ಸಂಪೂರ್ಣವಾಗಿ ಫಿಟ್ ಆಗಿಲ್ಲದ ಕಾರಣ ಈ ಸರಣಿಯಲ್ಲಿ ಟೀಂ ಇಂಡಿಯಾದ ಭಾಗವಾಗಿಲ್ಲ. ಇಶಾನ್ ಕಿಶನ್ ಮತ್ತು ಜಿತೇಶ್ ಶರ್ಮಾ ಇಬ್ಬರೂ ತಂಡದಲ್ಲಿ ಆಯ್ಕೆಯಾಗಿದ್ದಾರೆ.