ದುಬೈ: ಆಸ್ಟ್ರೇಲಿಯಾದಲ್ಲಿ ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್ಗೆ ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ನೇರ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿವೆ. ಆದರೆ 2 ಬಾರಿಯ ವಿಶ್ವ ಚಾಂಪಿಯನ್ ವೆಸ್ಟ್ ಇಂಡೀಸ್ ಮತ್ತು ಮಾಜಿ ಚಾಂಪಿಯನ್ ಶ್ರೀಲಂಕಾ ತಂಡಗಳು ಅರ್ಹತಾ ಸುತ್ತಿನಲ್ಲಿ ಆಡಬೇಕಿದೆ.
ಪ್ರಸ್ತುತ ವಿಶ್ವಕಪ್ನಲ್ಲಿನ ಚಾಂಪಿಯನ್ ಮತ್ತು ರನ್ನರ್ ಅಪ್ ತಂಡಗಳು ಮತ್ತು ಟಿ20 ಶ್ರೇಯಾಂಕದ ಅಗ್ರ 6 ತಂಡಗಳು 2022 ರ ಟಿ20 ವಿಶ್ವಕಪ್ಗೆ ನೇರ ಅರ್ಹತೆ ಪಡೆಯಲಿವೆ.
ನವೆಂಬರ್ 15, 2022 ವಿಶ್ವಕಪ್ಗೆ ನೇರ ಅರ್ಹತೆ ಪಡೆದುಕೊಳ್ಳಲು ಅಂತಿಮ ದಿನಾಂಕವಾಗಿದ್ದು ಇಂಗ್ಲೆಂಡ್ , ಪಾಕಿಸ್ತಾನ, ಭಾರತ, ನ್ಯೂಜಿಲ್ಯಾಂಡ್, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ತಂಡಗಳು ಈಗಾಗಲೇ ಅರ್ಹತೆ ಪಡೆದುಕೊಂಡಿವೆ.