ಜಮೈಕಾ(ವೆಸ್ಟ್ ಇಂಡೀಸ್):ಪ್ರವಾಸಿ ಪಾಕಿಸ್ತಾನದ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಸವಾರಿ ಮಾಡಿದ ಆತಿಥೇಯ ವೆಸ್ಟ್ ಇಂಡೀಸ್ 1 ವಿಕೆಟ್ ರೋಚಕ ಗೆಲುವು ದಾಖಲಿಸಿದೆ. ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ.
168 ರನ್ಗಳ ಗೆಲುವಿನ ಗುರಿ ಬೆನ್ನತ್ತಿದ್ದ ವೆಸ್ಟ್ ಇಂಡೀಸ್ ಕೇವಲ 16 ರನ್ ಗಳಿಸುವಷ್ಟರಲ್ಲಿ ಆರಂಭಿಕ ಮೂರು ವಿಕೆಟ್ ಕಳೆದುಕೊಂಡಿತು. ಬ್ರಾಥ್ವೈಟ್ (2), ಪೂವೆಲ್ (4) ಹಾಗೂ ಬೋನರ್ (5) ರನ್ಗಳಿಕೆ ಮಾಡಿ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ ರೊಸ್ಟೊನ್ ಹಾಗೂ ಬ್ಲಾಕ್ವುಡ್ ಮುರಿಯದ 4ನೇ ವಿಕೆಟ್ಗೆ 68 ರನ್ಗಳ ಜೊತೆಯಾಟವಾಡಿದರು. ಆದರೆ ಇವರ ವಿಕೆಟ್ ಪಡೆದುಕೊಳ್ಳುವಲ್ಲಿ ಪಾಕ್ನ ಅಶ್ರಫ್ ಯಶಸ್ವಿಯಾಗಿ ತಂಡಕ್ಕೆ ಮತ್ತೆ ಮುನ್ನಡೆ ತಂದಿಟ್ಟರು.
142 ರನ್ಗಳಿಕೆ ಮಾಡಿದ್ದ ವೇಳೆ 8 ವಿಕೆಟ್ ಕಳೆದುಕೊಂಡು ವೆಸ್ಟ್ ಇಂಡೀಸ್ ಸಂಕಷ್ಟಕ್ಕೆ ಸಿಲುಕಿಕೊಂಡಿತು. ಜೊತೆಗೆ ಗೆಲುವಿಗೆ 26 ರನ್ಗಳ ಅವಶ್ಯಕತೆ ಇತ್ತು. ಈ ವೇಳೆ ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿದ ಕೆಮರ್ (30 ಅಜೇಯ) ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಮೂಲಕ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ವೆಸ್ಟ್ ಇಂಡೀಸ್ ಗೆಲುವಿನ ಖಾತೆ ಓಪನ್ ಮಾಡಿದೆ.
ದಾಖಲೆ ಬರೆದ ವೆಸ್ಟ್ ಇಂಡೀಸ್ ಬೌಲರ್