ಮುಂಬೈ :ಭಾರತದ ಪರ ಟೆಸ್ಟ್ ಕ್ರಿಕೆಟ್ ಆಡಿ ಗಳಿಸಿಕೊಂಡಿರುವ ಆತ್ಮ ವಿಶ್ವಾಸವನ್ನ ಪ್ರಸ್ತುತ ನಡೆಯುತ್ತಿರುವ ಐಪಿಎಲ್ನಲ್ಲೂ ಮುಂದುವರಿಸಿಕೊಂಡು ಹೋಗುವುದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಹೇಳಿದ್ದಾರೆ.
ಕೇವಲ ನೆಟ್ ಬೌಲರ್ ಆಗಿ ಆಸ್ಟ್ರೇಲಿಯಾಗೆ ತೆರಳಿದ್ದ ಸುಂದರ್ ಗಾಯದಿಂದ ಹೊರಬಂದ ರವೀಂದ್ರ ಜಡೇಜಾ ಜಾಗದಲ್ಲಿ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿ ಮಿಂಚಿದ್ದರು. ಅವರು ಗಬ್ಬಾ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ನಲ್ಲಿ 62 ರನ್ ಮತ್ತು 2ನೇ ಇನ್ನಿಂಗ್ಸ್ನಲ್ಲಿ 22 ರನ್ ಸಿಡಿಸಿ ಐತಿಹಾಸಿಕ ಟೆಸ್ಟ್ ಸರಣಿ ಜಯದಲ್ಲಿ ಪ್ರಮುಖ ಭಾಗವಾಗಿದ್ದರು.
"ಟೆಸ್ಟ್ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ತೋರುವುದರಿಂದ ಖಂಡಿತ ಯಾವುದೇ ಸ್ವರೂಪದ ಕ್ರಿಕೆಟ್‌ನಲ್ಲಿ ಕ್ರಿಕೆಟಿಗನಿಗೆ ಆತ್ಮವಿಶ್ವಾಸ ಹೆಚ್ಚಿಸುತ್ತದೆ. ಕಳೆದ ಕೆಲವು ವರ್ಷಗಳಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಭಾರತ ಟೆಸ್ಟ್ ತಂಡದಲ್ಲಿ ಆಡಲು ಅವಕಾಶ ಪಡೆಯುವುದು ಯಾವುದೇ ಯುವ ಕ್ರಿಕೆಟಿಗನ ಕನಸಾಗಿರುತ್ತದೆ.