ಕರ್ನಾಟಕ

karnataka

ETV Bharat / sports

ಭಾರತ ಮಹಿಳಾ ಕ್ರಿಕೆಟ್ ತಂಡದ ಬ್ಯಾಟಿಂಗ್ ಕೋಚ್ ಆಗಿ ಹೃಷಿಕೇಶ್ ಕಾನಿಟ್ಕರ್ ನೇಮಕ

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನೂತನ ಬ್ಯಾಟಿಂಗ್ ಕೋಚ್ ಆಗಿ ಮಾಜಿ ಆಟಗಾರ ಹೃಷಿಕೇಶ್ ಕಾನಿಟ್ಕರ್ ಅವರನ್ನು ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಮಂಗಳವಾರ ನೇಮಿಸಿದೆ.

Hrishikesh Kanitkar
ಹೃಷಿಕೇಶ್ ಕನಿಟ್ಕರ್

By

Published : Dec 6, 2022, 9:28 PM IST

ನವ ದೆಹಲಿ: ಭಾರತೀಯ ಮಹಿಳಾ ಕ್ರಿಕೆಟ್‌ ತಂಡದ ನೂತನ ಬ್ಯಾಟಿಂಗ್ ಕೋಚ್ ಆಗಿ ಮಾಜಿ ಕ್ರಿಕೆಟಿಗ ಹೃಷಿಕೇಶ್ ಕಾನಿಟ್ಕರ್ ಅವರನ್ನು ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಮಂಗಳವಾರ ನೇಮಕ ಮಾಡಿದೆ. ಇವರು ಡಿಸೆಂಬರ್ 9 ರಿಂದ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ತಂಡ ಸೇರಿಕೊಳ್ಳಲಿದ್ದಾರೆ. ಈ ವರ್ಷಾರಂಭದಲ್ಲಿ ಹೃಷಿಕೇಶ್‌, ಐಸಿಸಿ ಅಂಡರ್-19 ಪುರುಷರ ವಿಶ್ವಕಪ್ ಗೆದ್ದ ತಂಡದ ಕೋಚ್ ಆಗಿದ್ದರು.

'ಭಾರತ ಮಹಿಳಾ ಕ್ರಿಕೆಟ್‌ ತಂಡದ ಬ್ಯಾಟಿಂಗ್‌ ಕೋಚ್‌ ಆಗಿ ನೇಮಕಗೊಂಡಿರುವುದು ಗೌರವದ ಸಂಗತಿ. ಈ ತಂಡದ ಬಹುದೊಡ್ಡ ಸಾಧನೆ ಮಾಡುವ ಎಲ್ಲ ಸಾಮರ್ಥ್ಯ ಹೊಂದಿದೆ. ತಂಡದಲ್ಲಿ ಯುವ ಹಾಗೂ ಅನುಭವಿ ಆಟಗಾರ್ತಿಯರ ಸರಿಯಾದ ಮಿಶ್ರಣವಿದೆ. ಮುಂದಿನ ಸವಾಲುಗಳನ್ನು ಎದುರಿಸಲು ಈ ತಂಡ ಸಂಪೂರ್ಣ ಸಜ್ಜಾಗಿದೆ. ಬ್ಯಾಟಿಂಗ್‌ ಕೋಚ್‌ ಆಗಿ ತಂಡಕ್ಕೆ ಸೇವೆ ಸಲ್ಲಿಸಲು ಉತ್ಸುಕನಾಗಿದ್ದೇನೆ' ಎಂದು ಹೃಷಿಕೇಶ್‌ ಹೇಳಿದ್ದಾರೆ.

ಇದೇ ವೇಳೆ, ಮಹಿಳಾ ತಂಡದ ಮಾಜಿ ಮುಖ್ಯ ಕೋಚ್ ರಮೇಶ್ ಪೊವಾರ್ ಸ್ಪಿನ್ ಬೌಲಿಂಗ್ ಕೋಚ್ ಆಗಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಸೇರಿಕೊಳ್ಳಲಿದ್ದಾರೆ.

ಇದನ್ನೂ ಓದಿ:ಫಿಫಾ ಟ್ರೋಫಿ ಅನಾವರಣಗೊಳಿಸಲಿದ್ದಾರೆ ದೀಪಿಕಾ ಪಡುಕೋಣೆ

ABOUT THE AUTHOR

...view details