ದಂಬುಲ್ಲಾ: ಶ್ರೀಲಂಕಾ ಪ್ರವಾಸದಲ್ಲಿರುವ ಭಾರತದ ಮಹಿಳಾ ಕ್ರಿಕೆಟ್ ತಂಡ ಟಿ-20ಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ದ ಭಾರತದ ವನಿತೆಯರು 34 ರನ್ಗಳ ಅಂತರದಿಂದ ಭರ್ಜರಿ ಜಯಗಳಿಸಿದ್ದಾರೆ.
ಗುರುವಾರ ದಂಬುಲಾದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಶಫಾಲಿ ವರ್ಮಾ (31) ನಾಯಕಿ ಹರ್ಮನ್ ಪ್ರೀತ್ ಕೌರ್ (22) ಮತ್ತು ರಾಡ್ರಿಗಸ್ ಅಜೇಯ (36)ರನ್ಗಳ ನೆರವಿನಿಂದ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 138 ರನ್ಗಳ ಸಾಧಾರಣ ಮೊತ್ತವನ್ನು ಕಲೆಹಾಕಿತ್ತು.
ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡ, ಭಾರತದ ವನಿತೆಯರ ಮಾರಕವಾದ ಬೌಲಿಂಗ್ ದಾಳಿಯಿಂದ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಕೇವಲ 104 ರನ್ಗಳನ್ನು ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ 34 ರನ್ ಗಳ ಅಂತರದಲ್ಲಿ ಸೋಲೊಪ್ಪಿಕೊಂಡಿತು.
ಇನ್ನು ಬೌಲಿಂಗ್ನಲ್ಲಿ ರಾಧಾ ಯಾದವ್ 2 ವಿಕೆಟ್ ಪಡೆದರೆ, ಶಫಾಲಿ ವರ್ಮಾ, ಪೂಜಾ ವಸ್ತ್ರಾಕರ್ ಮತ್ತು ದೀಪ್ತಿ ಶರ್ಮಾ ತಲಾ 1 ವಿಕೆಟ್ ಪಡೆದಿದ್ದಾರೆ. ಭಾರತದ ಪರ ಅಜೇಯ ಆಟವಾಡಿ ಸವಾಲಿನ ಮೊತ್ತವನ್ನು ಹೆಚ್ಚಿಸುವ ಮೂಲಕ ಜೆಮಿಮಾ ರಾಡ್ರಿಗಸ್ ಪಂದ್ಯ ಶ್ರೇಷ್ಠ ಆಟವಾನ್ನಾಡಿದ್ದಾರೆ. ಮೂರು ಪಂದ್ಯಗಳ ಸರಣಿಯಲ್ಲಿ ಭಾರತ ತಂಡ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.
ಇದನ್ನೂ ಓದಿ:ರಾಷ್ಟಮಟ್ಟದ ಕ್ವಾಡ್ ಸ್ಕೇಟಿಂಗ್: ಕೆವಿನ್ ಜೆ. ಹೊನ್ನಳ್ಳಿಗೆ ಎರಡು ಪದಕ