ಮುಂಬೈ:ಕ್ರಿಕೆಟ್ನಲ್ಲಿ ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ನಂತಹ ಬಲಿಷ್ಠ ತಂಡಗಳ ನಡುವೆ ಕ್ರಿಕೆಟ್ಗೆ ಆಗಷ್ಟೇ ಕಾಲಿಟ್ಟಿದ್ದ ಕ್ರಿಕೆಟ್ ಶಿಶು ಭಾರತ ತಂಡ 1983ರಲ್ಲಿ ವಿಶ್ವಕಪ್ ಎತ್ತಿ ಹಿಡಿದಿತ್ತು. ಈ ಮೂಲಕ ಕ್ರಿಕೆಟ್ ಜಗತ್ತಿಗೆ ತನ್ನ ದಿಟ್ಟ ಹೆಜ್ಜೆಯನ್ನಿಟ್ಟಿತ್ತು. ಮಾತ್ರವಲ್ಲದೆ ಭವಿಷ್ಯದಲ್ಲಿ ಯುವಕರು ಕ್ರಿಕೆಟ್ ಆಯ್ಕೆ ಮಾಡಿಕೊಳ್ಳಲು ಪ್ರೇರಣೆ ನೀಡಿತು.
ಆ ಟೂರ್ನಿಯಲ್ಲಿ ನಾಯಕರಾಗಿದ್ದ ಕಪಿಲ್ ದೇವ್ ಜಿಂಬಾಬ್ವೆ ವಿರುದ್ಧ ಸಿಡಿಸಿದ್ದ 175 ರನ್ಗಳು, ಕ್ರಿಕೆಟ್ ಜಗತ್ತಿನ ಸಾರ್ವಕಾಲಿಕ ಶ್ರೇಷ್ಠ ಇನ್ನಿಂಗ್ಸ್ ಎಂದೇ ಪರಿಗಣಿಸಲಾಗಿದೆ. ಅದೊಂದು ಇನ್ನಿಂಗ್ಸ್ ಭಾರತೀಯರ ಪಾಲಿಗೆ ಇಂದಿಗೂ ಅವಿಸ್ಮರಣೀಯವಾಗಿ ಉಳಿದುಕೊಂಡಿದೆ.
1983 ಜೂನ್ 18 ರಂದು ವಿಶ್ವಕಪ್ ಲೀಗ್ ಪಂದ್ಯದಲ್ಲಿ ಭಾರತ ತಂಡ ಜಿಂಬಾಬ್ವೆ ತಂಡವನ್ನು ಎದುರಿಸಿತ್ತು. ಮೊದಲು ಬ್ಯಾಟಿಂಗ್ ನಡೆಸಿದ್ದ ಭಾರತ ತಂಡ ಕೇವಲ 17 ರನ್ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು. ಆ ಸಂದರ್ಭದಲ್ಲಿ ಆಪತ್ಪಾಂದವನಾಗಿ ಬಂದ ನಾಯಕ ಕಪಿಲ್ ದೇವ್ ಜಿಂಬಾಬ್ವೆ ಬೌಲರ್ಗಳನ್ನು ಏಕಾಂಗಿಯಾಗಿ ಎದುರಿಸಿದರಲ್ಲದೇ ಮನ ಬಂದಂತೆ ದಂಡಿಸಿ ಭರ್ಜರಿ ಶತಕ ಸಿಡಿಸಿದ್ದರು.