ಗಾಲೆ(ಶ್ರೀಲಂಕಾ): ಆತಿಥೇಯ ಶ್ರೀಲಂಕಾ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ಗೆಲುವು ದಾಖಲು ಮಾಡಿದೆ. ಈ ಮೂಲಕ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಾಯಿಂಟ್ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿ ಮುಂದುವರೆದಿದೆ. ಈ ಮೂಲಕ ಟೆಸ್ಟ್ ಪಾಯಿಂಟ್ ಪಟ್ಟಿಯಲ್ಲಿ ಟೀಂ ಇಂಡಿಯಾ 4ನೇ ಸ್ಥಾನದಲ್ಲಿ ಮುಂದುವರೆದಿದೆ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಾಯಿಂಟ್ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ 71.43 ಪಾಯಿಂಟ್ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದು, 70 ಪಾಯಿಂಟ್ಗಳೊಂದಿಗೆ ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದೆ. ಲಂಕಾ ವಿರುದ್ಧ ಮೊದಲ ಟೆಸ್ಟ್ ಗೆದ್ದು ತನ್ನ ಪಾಯಿಂಟ್ ಏರಿಕೆ ಮಾಡಿಕೊಂಡ ಪಾಕ್ 3ನೇ ಸ್ಥಾನಕ್ಕೆ ಲಗ್ಗೆ ಹಾಕಿದೆ. ಹೀಗಾಗಿ, 52.08 ಪಾಯಿಂಟ್ನೊಂದಿಗೆ ಭಾರತ 4ನೇ ಸ್ಥಾನದಲ್ಲಿದೆ.