ಕಾನ್ಪುರ: ಭಾರತದ ವಿಕೆಟ್ ಕೀಪರ್ ಮತ್ತು ತಂಡದ ಅತ್ಯಂತ ಹಿರಿಯ ಆಟಗಾರನಾಗಿರುವ ವೃದ್ಧಿಮಾನ್ ಸಹಾ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನ ಕತ್ತು ನೋವಿನ ಸಮಸ್ಯೆ ಕಾರಣ ಪಂದ್ಯದಿಂದ ಹೊರಗುಳಿದಿದ್ದು, ಇವರ ಬದಲಿಗೆ ಶ್ರೀಕಾರ್ ಭರತ್ ವಿಕೆಟ್ ಕೀಪಿಂಗ್ ಜವಾಬ್ದಾರಿವಹಿಸಿಕೊಂಡಿದ್ದಾರೆ.
"ವೃದ್ಧಿಮಾನ್ ಸಹಾ ಕತ್ತುನೋವಿನಿಂದ ಬಳಲುತ್ತಿದ್ದಾರೆ. ಅವರನ್ನು ಬಿಸಿಸಿಐ ವೈದ್ಯಕೀಯ ತಂಡ ಚಿಕಿತ್ಸೆ ನೀಡುತ್ತಿದೆ ಮತ್ತು ಅವರ ಸುಧಾರಣೆಯ ಬಗ್ಗೆ ಮೇಲ್ವೀಚಾರಣೆ ಮಾಡುತ್ತಿದೆ. ಸಹಾ ಗೈರಿನಲ್ಲಿ ಕೆಎಸ್ ಭರತ್ ವಿಕೆಟ್ ಕೀಪಿಂಗ್ ಮಾಡಲಿದ್ದಾರೆ" ಎಂದು ಬಿಸಿಸಿಐ ಹೇಳಿಕೆ ಬಿಡುಗಡೆ ಮಾಡಿದೆ.