ಸೌತಾಂಪ್ಟನ್: ಶುಕ್ರವಾರ ನ್ಯೂಜಿಲ್ಯಾಂಡ್ ವಿರುದ್ಧ ನಡೆಯಲಿರುವ ವಿಶ್ವಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕಾಗಿ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದ್ದು, ಮೂವರು ವೇಗಿಗಳು ಮತ್ತು ಇಬ್ಬರು ಸ್ಪಿನ್ನರ್ಗಳೊಂದಿಗೆ ಕಣಕ್ಕಿಳಿಯಲಿದೆ.
WTC ಫೈನಲ್ಗೆ ಭಾರತ ತಂಡ ಪ್ರಕಟ: ಮೂವರು ವೇಗಿ, ಇಬ್ಬರು ಸ್ಪಿನ್ನರ್ಗಳಿಗೆ ಅವಕಾಶ - ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ
ಅನುಭವಿಗಳಾದ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಹಾಗೂ ವೇಗಿಗಳಾದ ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಮತ್ತು ಇಶಾಂತ್ ಶರ್ಮಾರಿಗೆ ಅವಕಾಶ ನೀಡಲಾಗಿದೆ.
ಅನುಭವಿಗಳಾದ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಹಾಗೂ ವೇಗಿಗಳಾದ ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಮತ್ತು ಇಶಾಂತ್ ಶರ್ಮಾರಿಗೆ ಅವಕಾಶ ನೀಡಲಾಗಿದೆ. ಆರಂಭಿಕರಾಗಿ ರೋಹಿತ್ ಶರ್ಮಾ ಮತ್ತು ರಿಷಭ್ ಪಂತ್ ವಿಕೆಟ್ ಕೀಪರ್ ಆಗಿ 6ನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಉಳಿದಂತೆ ಪೂಜಾರಾ, ಕೊಹ್ಲಿ ರಹಾನೆ ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದಾರೆ.
WTC ಫೈನಲ್ಗೆ ಭಾರತ ತಂಡ: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ರಿಷಭ್ ಪಂತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಇಶಾಂತ್ ಶರ್ಮಾ.