ಗುವಾಹಟಿ :ಅಂಡರ್-19 ವಿಶ್ವಕಪ್ ವಿಜೇತ ಭಾರತ ತಂಡದ ನಾಯಕ ಯಶ್ ಧುಲ್ ರಣಜಿ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ಪಂದ್ಯದಲ್ಲಿ ಎರಡೂ ಇನ್ನಿಂಗ್ಸ್ಗಳಲ್ಲೂ ಶತಕ ಸಿಡಿಸಿ ವಿಶೇಷ ದಾಖಲೆಗೆ ಪಾತ್ರರಾಗಿದ್ದಾರೆ.
ತಮಿಳುನಾಡು ವಿರುದ್ಧ ಗುವಾಹಟಿಯಲ್ಲಿ ನಡೆಯುತ್ತಿರುವ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ 113 ರನ್ಗಳಿಸಿದ್ದ ಧುಲ್ ಎರಡನೇ ಇನ್ನಿಂಗ್ಸ್ನಲ್ಲೂ ಅಜೇಯ 113 ರನ್ಗಳಿಸಿದರು. 202 ಎಸೆತಗಳನ್ನು ಎದುರಿಸಿದ ಅವರು ಇನ್ನಿಂಗ್ಸ್ನಲ್ಲಿ 14 ಬೌಂಡರಿ ಮತ್ತು 1 ಸಿಕ್ಸರ್ ಸೇರಿತ್ತು.
ಇವರ ಜೊತೆಗೆ ಇನ್ನಿಂಗ್ಸ್ ಆರಂಭಿಸಿದ್ದ ಧ್ರುವ್ ಶೋರೆ ಕೂಡ ಅಜೇಯ 107 ರನ್ಗಳಿಸಿದರು. ಆದರೆ, ಈ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದ್ದು, ತಮಿಳುನಾಡು ಮೊದಲ ಇನ್ನಿಂಗ್ಸ್ ಲೀಡ್ನೊಂದಿಗೆ 3 ಅಂಕ ಪಡೆದರೆ, ದೆಹಲಿ ಒಂದು ಅಂಕಕ್ಕೆ ತೃಪ್ತಿಪಟ್ಟುಕೊಂಡಿದೆ.