ಚಂಡೀಗಢ:ಜೆಪಿ ಅತ್ರೆ ಸ್ಮಾರಕ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ಹೆಚ್ಚಿನ ಅಭ್ಯಾಸಕ್ಕಾಗಿ ಡಿಎವಿ ಅಕಾಡೆಮಿಗೆ ತೆರಳಿದ್ದಾರೆ. ಜೆಪಿ ಅತ್ರೆ ಸ್ಮಾರಕ ಕ್ರಿಕೆಟ್ ಟೂರ್ನಿಯಲ್ಲಿ 16 ತಂಡಗಳು ಭಾಗವಹಿಸಲಿವೆ. ಅರ್ಜುನ್ ತೆಂಡೂಲ್ಕರ್ ಗೋವಾ ಅಸೋಸಿಯೇಶನ್ ಪರವಾಗಿ ಬ್ಯಾಟ್ ಬೀಸಲಿದ್ದಾರೆ.
ಈ ಕಾರಣಕ್ಕಾಗಿ ಅವರು ಡಿಎವಿ ಅಕಾಡೆಮಿಗೆ ತೆರಳಿದ್ದು, ಅಲ್ಲಿ ಭಾರತ ತಂಡದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ಅವರ ಬಳಿ ಅಭ್ಯಾಸ ಮಾಡುತ್ತಿದ್ದಾರೆ. ಯೋಗರಾಜ್ ಸಿಂಗ್ 1980 ರ ದಶಕದಲ್ಲಿ ಟೀಂ ಇಂಡಿಯಾ ಪರ ಆಡಿದ್ದರು. ಅವರು ವೆಲ್ಲಿಂಗ್ಟನ್‌ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಟೆಸ್ಟ್‌ಗೆ ಪದಾರ್ಪಣೆ ಮಾಡಿದರು, ಅದೇ ಎದುರಾಳಿಯ ವಿರುದ್ಧ ಬ್ರಿಸ್ಬೇನ್‌ನಲ್ಲಿ ತಮ್ಮ ODI ಚೊಚ್ಚಲ ಪಂದ್ಯವನ್ನೂ ಆಡಿದರು.