ಫುಟ್ಬಾಲ್ ದಂತಕಥೆ ಡಿಯಾಗೋ ಮರಡೋನಾ ಇನ್ನಿಲ್ಲ - ಅರ್ಜೆಂಟೀನಾದ ಡಿಯಾಗೋ ಮರಡೋನಾ
22:10 November 25
ಫುಟ್ಬಾಲ್ ದಂತಕಥೆ ಡಿಯಾಗೋ ಮರಡೋನಾ ಇನ್ನಿಲ್ಲ
ಬ್ಯೂನಸ್ ಐರೀಸ್ ( ಅರ್ಜೆಂಟೀನಾ):ಫುಟ್ಬಾಲ್ ದಂತಕಥೆ ಹಾಗೂ ಅರ್ಜೆಂಟೀನಾದ ಮಾಜಿ ಫುಟ್ಬಾಲ್ ಆಟಗಾರ ಡಿಯಾಗೋ ಅರ್ಮಾಂಡೋ ಮರಡೋನಾ ತಮ್ಮ 60ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಕೆಲವು ದಿನಗಳ ಹಿಂದೆ ಅವರ ಮೆದುಳಿನದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದ ಎರಡು ವಾರಗಳ ನಂತರ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
1986ರಲ್ಲಿ ಅರ್ಜೆಂಟೀನಾಗೆ ಫುಟ್ಬಾಲ್ ವಿಶ್ವಕಪ್ ಗೆದ್ದುಕೊಡುವಲ್ಲಿ ಪ್ರಮುಖ ವಹಿಸಿದ ಮರಡೋನಾ ಅವರು ತಮ್ಮ ಕೌಶಲ್ಯದಿಂದಾಗಿ ಹ್ಯಾಂಡ್ಸ್ ಆಫ್ ಗಾಡ್ ಎಂದೇ ಖ್ಯಾತಿ ಪಡೆದಿದ್ದರು.