ಢಾಕಾ :ಹಾಲಿ ಚಾಂಪಿಯನ್ ಹಾಗೂ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಭಾರತ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪುರುಷರ ಹಾಕಿ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 4-3 ಗೋಲುಗಳಿಂದ ಮಣಿಸಿದೆ. ಈ ಮೂಲಕ ಕಂಚಿನ ಪದಕ ಖಚಿತಪಡಿಸಿಕೊಂಡಿದೆ.
ಹರ್ಮನ್‌ಪ್ರೀತ್ ಸಿಂಗ್, ವರುಣ್ ಕುಮಾರ್, ಗುರ್ಸಾಹಿಬ್‌ಜಿತ್ ಸಿಂಗ್ ಮತ್ತು ಆಕಾಶದೀಪ್ ಸಿಂಗ್ ತಲಾ ಒಂದು ಗೋಲುಗಳ ನೆರವಿನಿಂದ ಪಾಕ್ ವಿರುದ್ಧ ರೋಚಕ ಜಯ ದಾಖಲಿಸಿತು.