ಬೆಂಗಳೂರು : ಈ ವರ್ಷದ ಜುಲೈನಲ್ಲಿ ಪ್ರಾರಂಭವಾಗಲಿರುವ ಟೋಕಿಯೊ ಒಲಿಂಪಿಕ್ಸ್‌ಗೆ ತಂಡವು ಉತ್ತಮವಾಗಿ ಸಜ್ಜಾಗಿದೆ ಎಂದು ಭಾರತೀಯ ಪುರುಷರ ಹಾಕಿ ತಂಡದ ಆಟಗಾರ ಮನ್ದೀಪ್ ಸಿಂಗ್ ತಿಳಿಸಿದ್ದಾರೆ.
ಕಳೆದ ವರ್ಷ ಜುಲೈ - ಆಗಸ್ಟ್‌ನಲ್ಲಿ ನಡೆಯಬೇಕಿದ್ದ ಟೋಕಿಯೊ ಒಲಿಂಪಿಕ್ಸ್ ಅನ್ನು ಕೋವಿಡ್ -19 ಕಾರಣದಿಂದಾಗಿ 2021 ರ ಬೇಸಿಗೆಗೆ ಮುಂದೂಡಲಾಗಿದೆ. ಕಳೆದ ಮೂರು ವಾರಗಳಿಂದ ಬೆಂಗಳೂರಿನ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (ಎಸ್‌ಎಐ) ಸಹಭಾಗಿತ್ವದಲ್ಲಿ ತರಬೇತಿ ಪಡೆಯುತ್ತಿರುವ ಸಂಭಾವ್ಯ ತಂಡದ ಆಟಗಾರರು, ಒಲಿಂಪಿಕ್ಸ್ನಲ್ಲಿ ಗೆಲ್ಲುವ ಏಕೈಕ ಗುರಿಯೊಂದಿಗೆ ಅಭ್ಯಾಸದಲ್ಲಿ ತೊಡಗಿದ್ದಾರೆ.