ಜೋರ್ಡಾನ್: ವಿಶ್ವಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕ ಪಡೆದಿರುವ ಅಮಿತ್ ಪಂಗಲ್ ಶನಿವಾರ ನಡೆದ ಏಷ್ಯನ್ ಒಲಿಂಪಿಕ್ ಅರ್ಹತಾ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದು, ಟೋಕಿಯೋ ಒಲಿಂಪಿಕ್ ಟಿಕೆಟ್ ಗಿಟ್ಟಿಸಿಕೊಳ್ಳಲು ಇನ್ನೊಂದು ಪಂದ್ಯ ಗೆಲ್ಲಬೇಕಿದೆ.
ಶನಿವಾರ ನಡೆದ ಪಂದ್ಯದಲ್ಲಿ ಮಂಗೋಲಿಯಾದ ಎಂಖ್ಮಂಡಖ್ ಖಾರ್ಖು ಅವರನ್ನು 3-2ರಲ್ಲಿ ಮಣಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಈ ಹಿಂದಿನ ಮುಖಾಮುಖಿಯಲ್ಲಿ 5-0ಯಲ್ಲಿ ಸೋಲನುಭವಿಸಿದ ಅಮಿತ್ ಪಂಗಲ್ ಇಂದಿಗ ಪಂದ್ಯದಲ್ಲಿ ಆರಂಭದಿಂದಲೂ ಮಂಗೋಲಿಯನ್ ಬಾಕ್ಸರ್ ವಿರುದ್ಧ ಮೇಲುಗೈ ಸಾಧಿಸಿದರು.