ಬರ್ಮಿಂಗ್ಹ್ಯಾಮ್(ಇಂಗ್ಲೆಂಡ್): ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳ ಪದಕಗಳ ಬೇಟೆ ಮುಂದುವರೆದಿದೆ. ಒಲಿಂಪಿಕ್ ಬೆಳ್ಳಿ ಪದಕ ವಿಜೇತ ಕುಸ್ತಿ ಪಟು ರವಿ ದಹಿಯಾ ಅವರು ಕಾಮನ್ವೆಲ್ತ್ ಗೇಮ್ಸ್ನ 57 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.
ಕುಸ್ತಿಯ 57 ಕೆಜಿ ವಿಭಾಗದ ಫೈನಲ್ನಲ್ಲಿ ನೈಜೀರಿಯಾದ ಎಬಿಕೆವೆನಿಮೊ ವೆಲ್ಸನ್ ಅವರನ್ನು ರವಿ ದಹಿಯಾ ಮಣಿಸುವ ಮೂಲಕ ಬಂಗಾರದ ಪದಕಕ್ಕೆ ಕೊರಳೊಡ್ಡಿದರು. ಈ ಮೂಲಕ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತಕ್ಕೆ 10ನೇ ಚಿನ್ನದ ಪದಕವನ್ನು ತಂದುಕೊಟ್ಟರು.