ಬರ್ಮಿಂಗ್‌ಹ್ಯಾಮ್(ಇಂಗ್ಲೆಂಡ್): ಕಾಮನ್‌ವೆಲ್ತ್ ಗೇಮ್ಸ್ನ ಬಾಕ್ಸಿಂಗ್ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಬಂದಿದೆ. ಬಾಕ್ಸಿಂಗ್ನ ಮಹಿಳೆಯರ 50 ಕೆಜಿ ವಿಭಾಗದಲ್ಲಿ ನಿಖತ್ ಜರೀನ್ ಬಂಗಾರದ ಪದಕ ಗೆದ್ದಿದ್ದಾರೆ. ಈ ಮೂಲಕ ಇಂದು ಒಂದೇ ದಿನ ಭಾರತಕ್ಕೆ ಬಾಕ್ಸಿಂಗ್ನಲ್ಲಿ ಮೂರು ಚಿನ್ನದ ಪದಕಗಳು ಬಂದಿವೆ.
ಈ ಮೊದಲು ಮಹಿಳೆಯರ (45-48 ಕೆಜಿ ವಿಭಾಗ) ಫೈನಲ್ ಪಂದ್ಯದಲ್ಲಿ ನೀತು ಗಂಗಾಸ್ ಚಿನ್ನದ ಗೆದ್ದಿದ್ದರು. ಅಲ್ಲದೇ, ಪುರುಷರ (48-51 ಕೆಜಿ ವಿಭಾಗ) ಬಾಕ್ಸಿಂಗ್ನಲ್ಲಿ ಅಮಿತ್ ಪಂಗಲ್ ಕೂಡ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದರು. ಈಗ ಮಹಿಳೆಯರ 50 ಕೆಜಿ ವಿಭಾಗದಲ್ಲಿ ನಿಖತ್ ಜರೀನ್ ಚಿನ್ನದ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿದ್ದಾರೆ.