ನವದೆಹಲಿ: ಛತ್ರಸಲ್ ಕ್ರೀಡಾಂಗಣದಲ್ಲಿ ನಡೆದಿದ್ದ ಕುಸ್ತಿಪಟು ಸಾಗರ್ ರಾಣಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಅಪರಾಧ ವಿಭಾಗದ (ಕ್ರೈ ಬ್ರಾಂಚ್) ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈವರೆಗೆ ಆರು ಮಂದಿ ಆರೋಪಿಗಳನ್ನು ಬಂಧಿಸಿರುವ ಅಧಿಕಾರಿಗಳು ಇಂದು ದೆಹಲಿಯ ರೋಹಿಣಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ಸಾಗರ್ ರಾಣಾ ಹತ್ಯೆ ಕೇಸ್: ಮತ್ತೊಬ್ಬ ಅರೆಸ್ಟ್, ಆರು ಆರೋಪಿಗಳಿಗೆ ನ್ಯಾಯಾಂಗ ಬಂಧನ - ಆರು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಕುಸ್ತಿಪಟು ಸಾಗರ್ ರಾಣಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಅಪರಾಧ ವಿಭಾಗದ (ಕ್ರೈ ಬ್ರಾಂಚ್) ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈವರೆಗೆ ಆರು ಮಂದಿ ಆರೋಪಿಗಳನ್ನು ಬಂಧಿಸಿರುವ ಅಧಿಕಾರಿಗಳು ಇಂದು ದೆಹಲಿಯ ರೋಹಿಣಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ಕುಸ್ತಿಪಟು ಸಾಗರ್ ರಾಣಾ
ಇದನ್ನೂ ಓದಿ:ಕುಸ್ತಿಪಟು ಮರ್ಡರ್ ಕೇಸ್: ಸುಶೀಲ್ ಕುಮಾರ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ಕುಸ್ತಿಪಟು ಸಾಗರ್ ರಾಣಾ ಮೇಲೆ ಮೇ 4ರಂದು ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಸೇರಿದಂತೆ ಅವರ ನಾಲ್ವರು ಸಹಚರರು ಹಲ್ಲೆ ನಡೆಸಿದ್ದರು. ಪರಿಣಾಮ ಸಾಗರ್ ರಾಣಾ ಸಾವನ್ನಪ್ಪಿದ್ದರು. ಜತೆಗೆ ಇಬ್ಬರು ಸ್ನೇಹಿತರಿಗೆ ಮಾರಣಾಂತಿಕ ಗಾಯವಾಗಿತ್ತು.