ಹೈದರಾಬಾದ್: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ (BWF World Championships) ಫೈನಲ್ ಪಂದ್ಯದಲ್ಲಿ ಸೋಲು ಕಂಡರೂ ಐತಿಹಾಸಿಕ ಬೆಳ್ಳಿ ಪದಕ ಗೆದ್ದು ಇತಿಹಾಸ ರಚನೆ ಮಾಡಿರುವ ಕಿಡಂಬಿ ಶ್ರೀಕಾಂತ್ ಈಟಿವಿ ಭಾರತ್ ಜೊತೆ ಮಾತನಾಡಿದ್ದು, ತಮ್ಮ ಮನದಾಳ ಬಿಚ್ಚಿಟ್ಟಿದ್ದಾರೆ. ಪದಕ ಗೆಲ್ಲುವುದಕ್ಕಾಗಿ ಅಲ್ಲ, ಬದಲಾಗಿ ಉತ್ತಮವಾದ ಪ್ರದರ್ಶನ ನೀಡುವುದರ ಮೇಲೆ ಹೆಚ್ಚು ಕೇಂದ್ರೀಕರಿಸಿರುವುದಾಗಿ ಅವರು ಈ ವೇಳೆ ತಿಳಿಸಿದರು.
ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕ ಗೆದ್ದ ನನಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್ ಮಾಡಿರುವುದು ನೋಡಿ ತುಂಬಾ ಸಂತೋಷವಾಯಿತು ಎಂದಿರುವ ಕಿಡಂಬಿ ಶ್ರೀಕಾಂತ್, ಇದು ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮವಾಗಿ ಆಡಲು ಪ್ರೇರೇಪಣೆ ನೀಡುತ್ತದೆ ಎಂದರು.
ವಿಶ್ವ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯ ಆಟಗಾರನೆಂಬ ಸಾಧನೆ ನಿರ್ಮಿಸಿರುವ ಕಿಡಂಬಿ, 2024ರ ಪ್ಯಾರೀಸ್ ಒಲಿಂಪಿಕ್ಸ್ನಲ್ಲಿ ಪದಕ ಗೆಲ್ಲುವತ್ತ ಗಮನ ಹರಿಸಿದ್ದಾರೆ. ಇದೇ ವಿಚಾರವಾಗಿ ಈಟಿವಿ ಭಾರತ್ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ.
ಇದನ್ನೂ ಓದಿರಿ:Pro Kabaddi League: ತಮಿಳ್ ತಲೈವಾಸ್ ವಿರುದ್ಧ ಬೆಂಗಳೂರು ಬುಲ್ಸ್ಗೆ ಜಯ
ಸಂದರ್ಶನದ ಆಯ್ದ ಭಾಗ ಇಂತಿದೆ
ಪ್ರಶ್ನೆ: ವಿಶ್ವ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಗೆದ್ದ ಮೊದಲ ಭಾರತೀಯ ಪ್ಲೇಯರ್ ನೀವು, ನಿಮ್ಮ ಪ್ರತಿಕ್ರಿಯೆ ಏನು?
ಸದ್ಯಕ್ಕೆ ಏನನ್ನೂ ಯೋಚಿಸುತ್ತಿಲ್ಲ. ವಿಶ್ವಚಾಂಪಿಯನ್ಶಿಪ್ನಲ್ಲಿ ನಾನು ಉತ್ತಮ ಫಾರ್ಮ್ನಲ್ಲಿದ್ದೆನು. ಅದರ ಫಲದಿಂದಲೇ ಪದಕ ಗೆಲ್ಲುವುದಕ್ಕೆ ಸಾಧ್ಯವಾಯಿತು ಎಂದಿದ್ದಾರೆ.