ಜಪಾನ್ : ಟೋಕಿಯೋ ಒಲಿಂಪಿಕ್ಸ್ ಗೇಮ್ ಜುಲೈ 23 ರಿಂದ ಆರಂಭವಾಗಲಿದೆ. ಕ್ರೀಡಾಕೂಟದ ಆರಂಭದಲ್ಲೇ ವಿಘ್ನ ಎದುರಾಗಿದೆ. ಒಲಿಂಪಿಕ್ಸ್ ವಿಲೇಜ್ನಲ್ಲಿ ಮೊದಲ ಕೋವಿಡ್ ಪ್ರಕರಣ ಪತ್ತೆಯಾಗಿದೆ ಎಂದು ಒಲಿಂಪಿಕ್ಸ್ -2020 ರ ಆಯೋಜಕರು ತಿಳಿಸಿದ್ದಾರೆ.
ಒಲಿಂಪಿಕ್ಸ್ ಗ್ರಾಮದಲ್ಲಿ ಸ್ಕ್ರೀನಿಂಗ್ ಮಾಡುವ ವೇಳೆ ಒಬ್ಬ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ. ಇದು ಇಲ್ಲಿ ಪತ್ತೆಯಾದ ಮೊದಲ ಕೋವಿಡ್ ಪ್ರಕರಣ ಎಂದು ಒಲಿಂಪಿಕ್ಸ್ ಆಯೋಜನಾ ಸಮಿತಿ ವಕ್ತಾರ ಮಾಸಾ ಟಕೇ ಮಾಧ್ಯಮಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ.