ನವದೆಹಲಿ:ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್) ಎರಡು ವರ್ಷಗಳ ನಂತರ ಹಳೆ ವೈಭವವನ್ನು ಪಡೆಯಲಿದೆ. ಹೇಗೆ ಗೊತ್ತಾ..?, ಫೈನಲ್ ಪಂದ್ಯದ ವೇಳೆ ಪ್ರೇಕ್ಷಕರ ಗ್ಯಾಲರಿಯಲ್ಲಿ ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಲಾಗಿದೆ. ಪ್ರೇಕ್ಷಕರು ನೇರವಾಗಿ ಆಟವನ್ನು ಕಣ್ತುಂಬಿಕೊಳ್ಳಬಹುದಾಗಿದೆ.
2021-22ರ ಐಎಸ್‌ಎಲ್ ಕ್ರೀಡಾಕೂಟದ ಫೈನಲ್ ಪಂದ್ಯ ಮಾರ್ಚ್ 20ರಂದು ಗೋವಾದಲ್ಲಿ ನಡೆಯಲಿದೆ. ಕಳೆದ ನವೆಂಬರ್‌ನಲ್ಲಿ ಈ ಫುಟ್‌ಬಾಲ್ ಲೀಗ್ ಆರಂಭವಾಗಿದ್ದು, ಸುಮಾರು ನಾಲ್ಕು ತಿಂಗಳ ನಂತರ ಫೈನಲ್ ಪಂದ್ಯವು ಮಾರ್ಗಾವೊದ ಪಿಜೆಎನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಫುಟ್ಬಾಲ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ಗೋವಾ ಸರ್ಕಾರ ಜನವರಿ 23ರಂದು ಕೊನೆಯದಾಗಿ ಕೋವಿಡ್ ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಈ ಅಧಿಸೂಚನೆ ಪ್ರಕಾರ ಸಾರ್ವಜನಿಕ ಸಭೆಗಳನ್ನು ನಡೆಸುವಾಗ ಗರಿಷ್ಠ ಸಾಮರ್ಥ್ಯದ ಶೇಕಡಾ 50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಬೇಕು ಎಂದು ಹೇಳಲಾಗಿದೆ.