ಟೋಕಿಯೋ: 2021ರ ಟೋಕಿಯೋ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್ನಲ್ಲಿ ವಿದೇಶಿ ಪ್ರೇಕ್ಷಕರಿಲ್ಲದೆ ನಡೆಯಲಿದೆ. ಕೊರೊನಾ ವೈರಸ್ ಹರಡುವುದನ್ನು ತಡೆಯುವುದಕ್ಕೆ ಆಯೋಜಕರು ಈ ತೀರ್ಮಾನ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.
ಕೊರೊನಾ ಸಾಂಕ್ರಾಮಿಕದ ಕಾರಣ ಕಳೆದ ವರ್ಷ ನಡೆಯಬೇಕಿದ್ದ ಒಲಿಂಪಿಕ್ಸ್ ಅನ್ನು ಮುಂದೂಡಲಾಗಿತ್ತು. ಇದೀಗ ಒಲಿಂಪಿಕ್ಸ್ ಜುಲೈ 23 ರಿಂದ ಆಗಸ್ಟ್ 8 ರವರೆಗೆ ನಡೆಯಲಿದೆ. ಪ್ಯಾರಾಲಿಂಪಿಕ್ಸ್ ಆಗಸ್ಟ್ 24ರಿಂದ ಸೆಪ್ಟೆಂಬರ್ 5ರವರೆಗೆ ನಡೆಯಲಿದೆ.