ನವದೆಹಲಿ : ಹಿಮಾದಾಸ್ ಪ್ರಸ್ತುತ ಪಟಿಯಾಲಾದ ನೇತಾಜಿ ಸುಭಾಷ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಸ್ಪೋರ್ಟ್ಸ್ನಲ್ಲಿ ಮುಂಬರುವ ಟೋಕಿಯೊ ಒಲಿಂಪಿಕ್ ಅರ್ಹತೆಗಾಗಿ ತಯಾರಿ ನಡೆಸುತ್ತಿದ್ದಾರೆ. ಆಟಗಾರರು ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದರೂ, ಅವರು ಕ್ರೀಡೆಯನ್ನು ಮುಂದುವರೆಸಲಿದ್ದಾರೆ ಎಂದು ಕೇಂದ್ರ ಕ್ರೀಡಾ ಮತ್ತು ಯುವಜನ ಸಚಿವ ಕಿರಣ್ ರಿಜಿಜು ಹೇಳಿದರು.
ಈ ಕುರಿತು ಟ್ವೀಟ್ ಮಾಡಿರುವ ಅವರು, ಹಿಮಾ ಅವರ ಕ್ರೀಡಾ ಭವಿಷ್ಯದ ಬಗ್ಗೆ ಹಲವರು ಕೇಳುತ್ತಿದ್ದಾರೆ. ಹಿಮಾ ಅವರು ಎನ್ಐಎಸ್ ಪಟಿಯಾಲದಲ್ಲಿ ಒಲಿಂಪಿಕ್ ಅರ್ಹತೆಗಾಗಿ ತರಬೇತಿ ಪಡೆಯುತ್ತಿದ್ದಾರೆ ಮತ್ತು ಭಾರತದ ಪರ ಓಟದಲ್ಲಿ ಭಾಗವಹಿಸುವುದನ್ನು ಅವರು ಮುಂದುವರಿಸುತ್ತಾರೆ. ನಮ್ಮ ಗಣ್ಯ ಕ್ರೀಡಾಪಟುಗಳು ವಿವಿಧ ಉದ್ಯೋಗಗಳಲ್ಲಿ ತೊಡಗಿಕೊಂಡಿದ್ದಾರೆ. ಆದರೂ, ಅವರು ಆಟ ಮುಂದುವರೆಸಲಿದ್ದಾರೆ. ನಿವೃತ್ತಿಯ ನಂತರವೂ ಅವರು ಕ್ರೀಡೆಗಳನ್ನು ಉತ್ತೇಜಿಸುವುದನ್ನು ಮುಂದುವರಿಸುತ್ತಾರೆ ಎಂದಿದ್ದಾರೆ.