ನವದೆಹಲಿ: 2036 ಮತ್ತು ಆ ಬಳಿಕ ನಡೆಯಲಿರುವ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಆಯೋಜಿಸುವ ಆಕಾಂಕ್ಷೆ ಹೊಂದಿದ ರಾಷ್ಟ್ರಗಳಲ್ಲಿ ಭಾರತವೂ ಸೇರಿದೆ ಎಂದು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ (ಐಒಸಿ) ಅಧ್ಯಕ್ಷ ಥಾಮಸ್ ಬ್ಯಾಚ್ ಹೇಳಿದ್ದಾರೆ.
ಈಗಾಗಲೇ 2032ರ ಸಮ್ಮರ್ ಗೇಮ್ಸ್ ಅನ್ನು ಆಸ್ಟ್ರೇಲಿಯಾದ ಬ್ರಿಸ್ಬೇನ್ನಲ್ಲಿ ಆಯೋಜನೆ ಮಾಡಲು ನಿರ್ಧರಿಸಲಾಗಿದೆ. ಇದಾದ ಬಳಿಕ 2036, 2040 ಮತ್ತು ನಂತರದಲ್ಲಿ ನಡೆಯಲಿರುವ ಕ್ರೀಡಾಕೂಟವನ್ನು ಆಯೋಜಿಸಲು ಇತರೆ ದೇಶಗಳು ಕಾತುರದಿಂದ ಕಾಯುತ್ತಿದೆ ಎಂದು ಅವರು ಹೇಳಿದರು.