ಬೆಂಗಳೂರು:ಸ್ಯಾಫ್ ಚಾಂಪಿಯನ್ಶಿಪ್ನ ಫೈನಲ್ನಲ್ಲಿ ಭಾರತ ಪುರುಷರ ತಂಡ ರೋಚಕ ಗೆಲುವು ಸಾಧಿಸಿದೆ. ಪೆನಾಲ್ಟಿ ಶೂಟೌಟ್‌ನಲ್ಲಿ ಭಾರತ 5-4 ಗೋಲುಗಳಿಂದ ಕುವೈತ್ ತಂಡವನ್ನು ಸೋಲಿಸಿ ಒಂಬತ್ತನೇ ಬಾರಿಗೆ ಸ್ಯಾಫ್ ಚಾಂಪಿಯನ್‌ಶಿಪ್ ಪ್ರಶಸ್ತಿ ಗೆದ್ದುಕೊಂಡಿದೆ.
ಬೆಂಗಳೂರಿನ ಶ್ರೀಕಂಠೀರವ ಸ್ಟೇಡಿಯಂನಲ್ಲಿ ಇಂದು ಭಾರತ ಮತ್ತು ಕುವೈತ್ ತಂಡಗಳು ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು. ಎರಡೂ ತಂಡಗಳು ರೋಚಕ ಹಣಾಹಣಿ ನಡೆಸಿದವು. ಮೊದಲಾರ್ಧದಲ್ಲಿ ಪ್ರಬಲ ಪೈಪೋಟಿ ನುಡುವೆ ತಲಾ ಒಂದು ಗೋಲು ಗಳಿಸಲು ಮಾತ್ರ ಸಾಧ್ಯವಾಯಿತು. ನಂತರ ಹೆಚ್ಚುವರಿ ಸಮಯದ ಅಂತ್ಯಕ್ಕೆ ಪೆನಾಲ್ಟಿ ಶೂಟೌಟ್‌ನಲ್ಲಿ ಭಾರತ 5-4ರಿಂದ ಕುವೈಟ್ ತಂಡವನ್ನು ಮಣಿಸಿತು. ಗುರ್‌ಪ್ರೀತ್ ಸಿಂಗ್ ಸಂಧು ಪೆನಾಲ್ಟಿಗಳನ್ನು ಉಳಿಸುವ ಮೂಲಕ ಹಾಲಿ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವಂತೆ ಮಾಡಿದರು.