ಗಾಂಧಿನಗರ (ಗುಜರಾತ್):ಗುಜರಾತ್ನಲ್ಲಿ ರಾಷ್ಟ್ರೀಯ ಕ್ರೀಡಾಕೂಟದಂತಹ ದೊಡ್ಡ ಕಾರ್ಯಕ್ರಮವನ್ನು ಆಯೋಜಿಸಿರುವುದು, ಮುಂದಿನ ದಿನಗಳಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ ಆಯೋಜನೆ ಮಾಡುವುದಕ್ಕೆ ಶಕ್ತಿ ಬಂದಿದೆ. ಭಾರತದಲ್ಲಿ ಒಲಿಂಪಿಕ್ಸ್ ನಡೆಯುವ ವಿಶ್ವಾಸವಿದೆ ಎಂದು ಮಾಜಿ ಬ್ಯಾಡ್ಮಿಂಟನ್ ಆಟಗಾರ ಪುಲ್ಲೇಲ ಗೋಪಿಚಂದ್ ಹೇಳಿದರು.
ಗುಜರಾತ್ನಲ್ಲಿ 7 ವರ್ಷಗಳ ಬಳಿಕ ರಾಷ್ಟ್ರೀಯ ಕ್ರೀಡಾಕೂಟ ಆಯೋಜನೆಯಾಗುತ್ತಿದೆ. ಇದು ಸಂತಸದ ವಿಚಾರ. ಇಂತಹ ದೊಡ್ಡ ಕ್ರೀಡಾಕೂಟವನ್ನು ಆಯೋಜಿಸಿದ ಮೇಲೆ ಒಲಿಂಪಿಕ್ಸ್ ಕ್ರೀಡಾಕೂಟವನ್ನೂ ನಡೆಸಿಕೊಡುವುದು ದೊಡ್ಡ ವಿಷಯವೇನಲ್ಲ. ಹಾಗಾಗಿ ಮುಂದೆ ಭಾರತದಲ್ಲಿ ಒಲಿಂಪಿಕ್ಸ್ ಕೂಟ ನಡೆಯಲಿದೆ ಎಂದು ಭಾವಿಸುವೆ ಎಂದರು.
ರಾಷ್ಟ್ರೀಯ ಕ್ರೀಡಾಕೂಟ 20 ಸಾವಿರಕ್ಕೂ ಅಧಿಕ ಕ್ರೀಡಾಳುಗಳು ಭಾಗವಹಿಸುವ ದೊಡ್ಡ ಸ್ಪರ್ಧೆಯಾಗಿದೆ. 11 ಸಾವಿರ ಸ್ಪರ್ಧಿಗಳು ಭಾಗವಹಿಸುವ ಒಲಿಂಪಿಕ್ಸ್ ಅನ್ನೂ ಸರ್ಕಾರ ಆಯೋಜಿಸುವ ವಿಶ್ವಾಸವಿದೆ ಎಂದು ಪುಲ್ಲೇಲ ಗೋಪಿಚಂದ್ ಹೇಳಿದರು.