ಢಾಕಾ(ಬಾಂಗ್ಲಾದೇಶ):ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿಯಲ್ಲಿ ಇಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ಸೆಣಸಾಟ ನಡೆಸಲಿದೆ. ಸೆಮಿಫೈನಲ್ ಹಾದಿ ಸುಗಮಗೊಳಿಸಿಕೊಳ್ಳುವ ಉದ್ದೇಶದಿಂದ ಭಾರತಕ್ಕೆ ಈ ಪಂದ್ಯ ಮಹತ್ವದಾಗಿದೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಏಳುಬೀಳು ಕಂಡಿದ್ದು, ತಾನು ಆಡಿರುವ ಮೊದಲ ಪಂದ್ಯದಲ್ಲಿ ಕೊರಿಯಾ ವಿರುದ್ಧ 2-2 ಅಂತರದಿಂದ ಡ್ರಾ ಸಾಧಿಸಿದ್ದು, ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 9-0 ಅಂತರದಿಂದ ಜಯ ಸಾಧಿಸಿದೆ. ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಉಭಯ ತಂಡಗಳು ತಲಾ ಮೂರು ಸಲ ವಿಜೇತವಾಗಿವೆ. ಆದರೆ, ಕಳೆದ ಕೆಲ ವರ್ಷಗಳಿಂದ ಪಾಕ್ ತಂಡ ಹೇಳಿಕೊಳ್ಳುವಂತಹ ಪ್ರದರ್ಶನ ನೀಡುತ್ತಿಲ್ಲವಾದರಿಂದ ಇಂದಿನ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸುವ ನೆಚ್ಚಿನ ತಂಡ ಎನ್ನಲಾಗಿದೆ.