ಬರ್ಮಿಂಗ್‌ಹ್ಯಾಮ್(ಇಂಗ್ಲೆಂಡ್): ಕಾಮನ್‌ವೆಲ್ತ್ ಗೇಮ್ಸ್ನಲ್ಲಿ ಟ್ರಿಪಲ್ ಜಂಪ್‌ನಲ್ಲಿ ಭಾರತಕ್ಕೆ ಚಿನ್ನ ಮತ್ತು ಬೆಳ್ಳಿ ಪದಕಗಳು ಬಂದಿವೆ. ಪುರುಷರ ಟ್ರಿಪಲ್ ಜಂಪ್‌ನಲ್ಲಿ ಎಲ್ದೋಸ್ ಪಾಲ್ 17.03 ಮೀಟರ್ ಜಿಗಿತದೊಂದಿಗೆ ಬಂಗಾರದ ಪದಕ ಗೆದ್ದಿದ್ದಾರೆ. ಇತ್ತ, ಅಬ್ದುಲ್ಲಾ ಅಬೂಬಕರ್ 17.02 ಮೀಟರ್ ಜಿಗಿದು ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ.
ಟ್ರಿಪಲ್ ಜಂಪ್‌ನಲ್ಲಿ ಭಾರತದ ಪಟುಗಳು ಇತಿಹಾಸ ನಿರ್ಮಿಸಿದ್ದಾರೆ. ಕಾಮನ್‌ವೆಲ್ತ್ ಗೇಮ್ಸ್ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕವನ್ನು ಎಲ್ದೋಸ್ ಪಾಲ್ ತಂದು ಕೊಟ್ಟಿದ್ದಾರೆ.