ಬೆಂಗಳೂರು: ಕೊಲಂಬಿಯಾದಲ್ಲಿ ನಡೆಯುತ್ತಿರುವ ಅಂಡರ್ 20 ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕದ ಪ್ರಿಯಾ ಮೋಹನ್ ಒಳಗೊಂಡ ಭಾರತದ ರಿಲೇ ತಂಡ ಬೆಳ್ಳಿ ಗೆದ್ದಿದೆ. ಇವರಿಗೆ ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅಭಿನಂದನೆ ಸಲ್ಲಿಸಿದ್ದಾರೆ.
ಭಾರತದ ರಿಲೇ ತಂಡಕ್ಕೆ ಬೆಳ್ಳಿ: ಪ್ರಿಯಾ ಮೋಹನ್‌ಗೆ ₹5 ಲಕ್ಷ ನಗದು ಪುರಸ್ಕಾರ - State athlete Priya Mohan
ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ರಿಲೇ ತಂಡ ಬೆಳ್ಳಿ ಗೆದ್ದಿದೆ. ಇದರಲ್ಲಿ ಭಾಗವಹಿಸಿದ್ದ ರಾಜ್ಯದ ಅಥ್ಲೀಟ್ ಪ್ರಿಯಾ ಮೋಹನ್‌ಗೆ 5 ಲಕ್ಷ ನಗದು ಪುರಸ್ಕಾರ ನೀಡುವುದಾಗಿ ಸಚಿವ ಡಾ.ನಾರಾಯಣಗೌಡ ಘೋಷಣೆ ಮಾಡಿದ್ದಾರೆ.
ಭಾರತದ ರಿಲೇ ತಂಡಕ್ಕೆ ಬೆಳ್ಳಿ
ಕರ್ನಾಟಕದ ಪ್ರಿಯಾ ಮೋಹನ್, ಭರತ್ ಶ್ರೀಧರ್, ರೂಪಾಲ್ ಚೌಧರಿ ಮತ್ತು ಕಪಿಲ್ ಅವರನ್ನೊಳಗೊಂಡ ಮಿಕ್ಸಡ್ ರಿಲೇ ತಂಡ ಉತ್ತಮ ಪ್ರದರ್ಶನ ತೋರಿದೆ. ಕೂದಲೆಳೆ ಅಂತದರಲ್ಲಿ ಚಿನ್ನದ ಪದಕ ಕೈ ತಪ್ಪಿದೆ. ಕಳೆದ ವರ್ಷ ಕಂಚಿನ ಪದಕ ಗೆದ್ದಿದ್ದ ಭಾರತದ ರಿಲೇ ತಂಡ ಈ ಬಾರಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದೆ. ಭಾರತ ತಂಡವನ್ನು ಪ್ರತಿನಿಧಿಸಿದ್ದ ಕರ್ನಾಟಕದ ಪ್ರಿಯಾ ಮೋಹನ್‌ಗೆ 5 ಲಕ್ಷ ರೂ. ನಗದು ಪುರಸ್ಕಾರ ನೀಡುವುದಾಗಿ ನಾರಾಯಣಗೌಡ ಘೋಷಿಸಿದ್ದಾರೆ.
ಇದನ್ನೂ ಓದಿ:ವಿಶ್ವ ಅಂಡರ್-20 ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ರಿಲೇಯಲ್ಲಿ ಭಾರತಕ್ಕೆ ಬೆಳ್ಳಿ ಪದಕ