ಫಾಗ್ವಾರ(ಪಂಜಾಬ್) : ಅಥ್ಲೆಟಿಕ್ಸ್ನಲ್ಲಿ ಚಿನ್ನ ಗೆಲ್ಲುವ ನೂರು ವರ್ಷಗಳ ಭಾರತೀಯರ ಕನಸನ್ನು ಇಡೇರಿಸಿದ ಜಾವಲಿನ್ ಥ್ರೋವರ್ ನೀರಜ್ ಚೋಪ್ರಾಗೆ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ 50 ಲಕ್ಷ ಬಹುಮಾನವಾಗಿ ಘೋಷಿಸಿದೆ.
ಜಾವಲಿನ್ ಥ್ರೋನಲ್ಲಿ 87.58 ಮೀಟರ್ ಎಸೆಯುವ ಮೂಲಕ ದಿಗ್ಗಜರನ್ನು ಹಿಂದಿಕ್ಕಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದರು. ಇವರು ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿಯಲ್ಲಿ ಬಿಎ ಪದವಿ ಪಡೆದಿದ್ದರು. ತಮ್ಮ ಯುನಿವರ್ಸಿಟಿಯಲ್ಲಿ ಓದಿದ ಭಾರತಕ್ಕೆ ಚಿನ್ನದ ಪದಕ ಗೆದ್ದು ಕೊಟ್ಟಿರುವುದಕ್ಕೆ ನೀರಜ್ಗೆ 50 ಲಕ್ಷ ರೂಪಾಯಿಗಳನ್ನು ಬಹುಮಾನವಾಗಿ ಘೋಷಣೆ ಮಾಡಿದೆ.