ನವದೆಹಲಿ:ಗುಜರಾತ್ನಲ್ಲಿ ಸೆಪ್ಟೆಂಬರ್ನಲ್ಲಿ ನಡೆಯುವ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ದೇಶಿಯ ಕ್ರೀಡೆಗಳನ್ನು ಉತ್ತೇಜಿಸುವ ಸಲುವಾಗಿ ಮಲ್ಲಗಂಬ ಮತ್ತು ಯೋಗಾಸನಕ್ಕೆ ಅವಕಾಶ ನೀಡಲಾಗಿದೆ. ಕೇರಳಲ್ಲಿ ಇತ್ತೀಚೆಗೆ ಮುಕ್ತಾಯವಾದ ಖೇಲೋ ಇಂಡಿಯಾದಲ್ಲಿ ಈ ಕ್ರೀಡೆಗಳನ್ನು ಸೇರಿಸಿಕೊಳ್ಳಲಾಗಿತ್ತು.
ಏಕತೆಗಾಗಿ ಕ್ರೀಡೆಯನ್ನು ಆಯೋಜಿಸಲಾಗಿದ್ದು, ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಒಟ್ಟು 36 ಕ್ರೀಡೆಗಳು ಮತ್ತು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕ್ರೀಡಾ ತಂಡಗಳು ಭಾಗವಹಿಸಲಿವೆ ಎಂದು ಭಾರತೀಯ ಒಲಿಂಪಿಕ್ ಸಂಸ್ಥೆ (ಐಒಎ) ಬುಧವಾರ ಪ್ರಕಟಿಸಿದೆ.